More

    ಕರ್ನಾಟಕ ವಸತಿ ಸಂಘ ಸಂಸ್ಥೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್​-19 ಕಾಯಿಲೆ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಅಂತೆಯೇ ಕರ್ನಾಟಕ ವಸತಿ ಸಂಘ-ಸಂಸ್ಥೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಮಾರ್ಚ್​ 23ರಂದು ಸುತ್ತೋಲೆ ಹೊರಡಿಸಲಾಗಿತ್ತು. ಇದೀಗ, ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಣೆಯಲ್ಲಿ ತಿಳಿಸಿದೆ.

    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಿವಿಧ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಮೇ 6 ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಅರ್ಜಿ ಸಲ್ಲಿಕೆ ಹಾಗೂ ಪ್ರವೇಶ ಪರೀಕ್ಷೆಯ ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಪ್ರಾಧಿಕಾರ ಹೇಳಿದೆ. ಅಭ್ಯರ್ಥಿಗಳು ವಿವರಗಳಿಗಾಗಿ kea.kar.nic.in ಗಮನಿಸುತ್ತ ಇರಬೇಕೆಂದು ಕೋರಲಾಗಿದೆ.

    ದೇಶಾದ್ಯಂತ ಲಾಕ್​ಡೌನ್​ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಂತಾಗಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶಾಲೆಗಳಿಗೆ ಬೇಸಿಗೆ ರಜೆ ನೀಡಿದ್ದರೆ, ಕಾಲೇಜುಗಳಿಗೆ ಏಪ್ರಿಲ್​ 14ರವರೆಗೆ ರಜೆ ಘೋಷಿಸಲಾಗಿದೆಎಂದು ಶಿಕ್ಷಣ ಇಲಾಖೆ ತಿಳಿಸಿದೆ.

    ಶಿಕ್ಷಕರಿಗೆ ಏಪ್ರಿಲ್​ 14ರವರೆಗೆ ಮಾತ್ರ ರಜೆ; ಮೇ 20ರವರೆಗೆ ಅಲ್ಲ: ಕಾಲೇಜು ಶಿಕ್ಷಣ ಆಯುಕ್ತರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts