More

    ಗಿರಿಜನ ಹಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಿ

    ಸರಗೂರು: ಅರಣ್ಯದಂಚಿನ ಗಿರಿಜನ ಹಾಡಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಕಾಲ ಕಾಲಕ್ಕೆ ಹಾಡಿ ಜನರ ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ತಹಸೀಲ್ದಾರ್ ರುಕೀಯಾ ಬೇಗಂ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ತಾಲೂಕಿನ ಬಿ.ಮಟಕೆರೆ ಗ್ರಾಪಂ ವ್ಯಾಪ್ತಿಯ ಕೆಬ್ಬೇಪುರ ಹಾಡಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಬಿ.ಮಟಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಹೆಚ್ಚಾಗಿ ಹಾಡಿ ಪ್ರದೇಶಗಳಿರುವುದರಿಂದ ಇಲ್ಲಿರುವ ಪ್ರತಿ ಮನೆಗಳಿಗೂ ಜೆಜೆಎಂ ಮೂಲಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕಾಲ ಕಾಲಕ್ಕೆ ಇಲ್ಲಿನ ಜನರ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಆದಿವಾಸಿ ಗಿರಿಜನರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳನ್ನು ಸಮರ್ಪಕವಾಗಿ ಪಂಚಾಯಿತಿ ಮೂಲಕ ಅನುಷ್ಠಾನಗೊಳಿಸಬೇಕು. ಇದರಿಂದ ಯೋಜನೆ ನಿಜವಾದ ಫಲಾನುಭವಿಗಳಿಗೆ ತಲುಪಿ ಇತರರಂತೆ ಬದುಕಲು ಸಹಕಾರಿಯಾಗಲಿದೆ ಎಂದರು.

    ಬಳಿಕ ಗ್ರಾಪಂ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಹಾಡಿ ವಾಸಿಗಳು ‘ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ಸರಿಯಾಗಿ ಕೆಲಸ ಮಾಡಿಕೊಡುವುದಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಾಳೆ’ ಎಂದು ದೂರಿದರು. ಈಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಹಸೀಲ್ದಾರ್ ಭರವಸೆ ನೀಡಿದರು.
    ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts