More

    ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿಡಿ

    ಮದ್ದೂರು: ಮಕ್ಕಳಿಗೆ ಮೊಬೈಲ್ ನೀಡುವ ಬದಲು ಅವರನ್ನು ವಿದ್ಯಾಭ್ಯಾಸದತ್ತ ಗಮನ ಹರಿಸುವಂತೆ ಮಾಡಬೇಕು ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಮಹಾ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ ಪಾಲಕರು ಮತ್ತು ಶಿಕ್ಷಕರಿಗೆ ಸಲಹೆ ನೀಡಿದರು.

    ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಲಿಟ್ಲ್ ಫ್ಲವರ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ವಿದ್ಯಾಭ್ಯಾಸಕ್ಕಿಂತ ಮೊಬೈಲ್ ನೋಡುವುದನ್ನೇ ಗೀಳು ಮಾಡಿಕೊಂಡಿರುವುದು ವಿಷಾದಕರ. ಹಾಗಾಗಿ ಪಾಲಕರು ಹಾಗೂ ಶಿಕ್ಷಕರ ಜವಾಬ್ದಾರಿ ವಹಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ಕಾರ್ಯಕ್ರಮವನ್ನು ಬಿಇಒ ಸಿ.ಎಚ್.ಕಾಳೀರಯ್ಯ ಉದ್ಘಾಟಿಸಿದರು. ಶಸ್ತ್ರಚಿಕಿತ್ಸಕ ಡಾ.ಸೋನಾಲಿ ಉಚಿಲ್ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎನ್.ಶ್ರೀಕಂಠಯ್ಯ, ಸಾವಯವ ಕೃಷಿಕ ಎಸ್.ಸುಂದರ್ ಅವರನ್ನು ಶಾಲಾ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.

    ಶಾಲೆ ಅಧ್ಯಕ್ಷ ಎಂ.ಸಿ.ರೇಣುಕುಮಾರ್, ಕಾರ್ಯದರ್ಶಿ ಎಚ್.ಕೆ.ಶ್ರುತಿ, ಶಿಕ್ಷಕರಾದ ರೂಪಾ, ಯೋಗಿತಾ, ನಾಗವೇಣಿ ಭಟ್, ಭವ್ಯಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts