More

    ವಿದೇಶದಿಂದ ಬರುವ ಕನ್ನಡಿಗರಿಗಾಗಿ ಕೆಂಪೇಗೌಡ ವಿಮಾನ ನಿಲ್ದಾಣ ರೆಡಿ: ಸುಧಾಕರ್, ಬೊಮ್ಮಾಯಿ ಪರಿಶೀಲನೆ

    ಬೆಂಗಳೂರು: ವಿದೇಶದಲ್ಲಿರುವ ಕನ್ನಡಿಗರು ಹನ್ನೊಂದನೇ ತಾರೀಕಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

    ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಗತ್ಯ ಸೂಚನೆ ಮತ್ತು ಮಾರ್ಗದರ್ಶನವನ್ನು ನೀಡಿದರು. ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಒಟ್ಟು 6,500ಕ್ಕೂ ಅಧಿಕ ಪ್ರಯಾಣಿಕರು ಆಗಮಿಸುವ ನಿರೀಕ್ಷೆ ಇದ್ದು, ಅವರೆಲ್ಲರನ್ನು ತಪಾಸಣೆ ನಡೆಸಿ ಎರಡು ಹಂತದ ಪರೀಕ್ಷೆಗೆ ಒಳಪಡಿಸಲಾಗುವುದು. ಅವರಿಗೆ ಯಾವುದೇ ಸೊಂಕು ಇಲ್ಲ ಎಂಬುದು ದೃಢಪಟ್ಟ ನಂತರವಷ್ಟೇ ಮನೆಗೆ ಕಳುಹಿಸಲಾಗುವುದು ಎಂದು ಸಚಿವ ಸುಧಾಕರ್ ಅವರು ತಿಳಿಸಿದರು.

    ಇದನ್ನೂ ಓದಿ ಕರ್ನಾಟಕದಲ್ಲಿ ಆಂಧ್ರದ ಕಳಪೆ ಬಿತ್ತನೆ ಬೀಜ ಮಾಫಿಯಾ ಕಾರ್ಯಾಚರಣೆ ಪತ್ತೆ

    ಒಟ್ಟು ಹದಿನಾಲ್ಕು ದಿನಗಳ ಕಾಲ ಎಲ್ಲ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು. ಅದಕ್ಕಾಗಿ ಹೋಟೆಲ್ ಗಳು, ಶಾಲಾ ಕಾಲೇಜು, ಹಾಸ್ಟೆಲ್ ಮತ್ತಿತರ ಕಡೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇವರನ್ನು ಕ್ವಾರಂಟೈನ್ ನಲ್ಲಿ ಇರಿಸುವುದರಿಂದ ಸಾರ್ವಜನಿಕರಿಗಾಗಲಿ ಅಕ್ಕಪಕ್ಕದವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಈ ಬಗ್ಗೆ ಯಾರಿಗೂ ಆತಂಕವಾಗಲೀ ಭಯವಾಗಲಿ ಬೇಡ ಎಂದು ಸಚಿವರು ಮಾಹಿತಿ ನೀಡಿದರು.

    ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕುರಿತು ಅಗತ್ಯ ಸೂಚನೆಗಳನ್ನು ನೀಡಿದ್ದು, ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಸಚಿವ ಸುಧಾಕರ್ ತಿಳಿಸಿದರು.

    ಇದನ್ನೂ ಓದಿ ಹಿಜ್ಬುಲ್ ಮುಜಾಹಿದ್ದೀನ್ ನಾಯಕನ ಸಂತಾಪ ಸಭೆಯಲ್ಲಿ ಉಗ್ರರು ಮಾಡಿದ ಶಪಥ ಏನು?

    ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಇಲಾಖೆಯ ಸಿಬ್ಬಂದಿಗಳು ಪ್ರಯಾಣಿಕರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ವಿಮಾನ ನಿಲ್ದಾಣದ ಪರಿಶೀಲನೆ ವೇಳೆ ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸಚಿವರಿಗೆ ಮಾಹಿತಿ ನೀಡಿದರು.

    ಶಾಲಾ ಪಠ್ಯಗಳ ಸಿಲೆಬಸ್ ಕಡಿತ: ಸಚಿವ ಸುರೇಶ್ ಕುಮಾರ್ ಇಂಗಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts