ಕೆಂಪೇಗೌಡರು ಮಹಾನ್ ಮಾನವತವಾದಿ

hbr (6)
Published on

ಹೆಬ್ರಿ: ಕೆಂಪೇಗೌಡರು, ಭಾಷಾತೀತ ಹಾಗೂ ಜಾತ್ಯತೀತ ಮನೋಭಾವನೆ ಹೊಂದಿದ್ದವರು. ಎಲ್ಲ ಜಾತಿ, ಧರ್ಮ, ಭಾಷೆಯ ಜನರಿಗೆ ಒಂದೇ ಸೂರಿನಡಿ ಅವಕಾಶ ಕಲ್ಪಿಸಲು ಬೆಂಗಳೂರು ನಗರವನ್ನು ನಿರ್ವಾಣ ವಾಡಿದ ಮಹಾನ್ ವಾನವತವಾದಿ ಎಂದು ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರವೀಣ್ ಕುವಾರ್ ಎಸ್. ಹೇಳಿದರು.

ಹೆಬ್ರಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ್ ಬಂಗೇರ ಉದ್ಘಾಟಿಸಿದರು. ತಹಸೀಲ್ದಾರ್ ಎಸ್.ಎ.ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ ಬಹುವಾನ ವಿತರಿಸಲಾಯಿತು. ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ವಿವಿಧ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿದ್ಯಾಧರ ಹೆಗ್ಡೆ, ಸುಧಾಕರ್, ಉಮೇಶ್, ದಿವಾಕರ ಮರಕಾಲ ಎಸ್., ಶಿಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net