More

    ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿಗೆ 1 ಲಕ್ಷ

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
    ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು. ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲೂಕು ಕೇಂದ್ರಗಳಿಗೆ 20 ಸಾವಿರದ ಜತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು ಎಂದರು.
    ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ ಎಂದು ವಿವರಿಸಿದರು.
    ಕೆಂಪೇಗೌಡರು ನಿರ್ಮಾಣ ಮಾಡಿದ್ದ ಗೋಪುರಗಳನ್ನು ದಾಟಿ ಬೆಂಗಳೂರು ಮೂರು, ನಾಲ್ಕು ಪಟ್ಟು ಹೆಚ್ಚು ಬೆಳೆದಿದೆ. ಬೆಂಗಳೂರು ಇಷ್ಟು ಅಗಾಧವಾಗಿ ಬೆಳೆಯಬಹುದು ಎನ್ನುವ ಕಲ್ಪನೆ ಸ್ವತಃ ಕೆಂಪೇಗೌಡರಿಗೆ ಇರಲಿಲ್ಲ. ಈ ನಗರ ಸ್ಥಾಪಿಸಿದ ಮಹಾನ್ ವ್ಯಕ್ತಿಯ ಜಯಂತಿಯನ್ನು ಇತರೇ ಸಾಧಕರ ಜಯಂತಿಯಂತೆ ಆಚರಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
    ಬಿ.ಎಲ್.ಶಂಕರ್ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾಡ್‌ರ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕೇ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
    ಕೆಂಪೇಗೌಡರನ್ನು ಕೇವಲ ಒಂದು ಜಾತಿಗೆ ಸೀಮಿತ ಮಾಡಬಾರದು. ಜಾತ್ಯತೀತ ತತ್ವದಲ್ಲಿ ಆಚರಣೆ ಮಾಡಬೇಕು. ಕೆಂಪೇಗೌಡರ ಜಯಂತಿ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ಈ ರೀತಿ ನಮ್ಮ ಸರ್ಕಾರ ಬಿಂಬಿಸುವುದಿಲ್ಲ. ಎಲ್ಲ ವರ್ಗದ ಜನರಿಗೂ ಕೆಂಪೇಗೌಡರು ಸಹಕಾರ ನೀಡಿದ್ದಾರೆ ಎಂದರು.
    ಬಸವಣ್ಣನವರ ಜಯಂತಿಯನ್ನು ಕೇವಲ ಲಿಂಗಾಯತರು ಹಾಗೂ ಅಂಬೇಡ್ಕರ್ ಅವರ ಜಯಂತಿಯನ್ನು ಪರಿಶಿಷ್ಟರು ಮಾಡುತ್ತಿದ್ದಾರೆ. ನಾವು ಎಲ್ಲಾ ಸಂಘ ಸಂಸ್ಥೆಗಳನ್ನು, ಸಮುದಾಯಗಳನ್ನು ಸೇರಿಸಿಕೊಂಡು ಆಚರಣೆ ಮಾಡಬೇಕು. ಸಭೆಯಲ್ಲಿ 100 ಕ್ಕೂ ಉತ್ತಮವಾದ ಸಲಹೆಗಳು ಬಂದಿವೆ. ಇದರಲ್ಲಿ ಸೂಕ್ತವಾದವುಗಳನ್ನು ಅಧಿಕಾರಿಗಳ ಬಳಿ ಚರ್ಚಿಸಲಾಗುವುದು ಎಂದು ಹೇಳಿದರು.

    See also  ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರಾಗಿ ನಟರಾಜಗೌಡ ನೇಮಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts