More

    ಬೆಂಗಳೂರು ವಿಸ್ತರಣೆಯಾಗುತ್ತಿದ್ದಂತೆ ಜಮೀನು ನಾಶ: ಚುಂಚಶ್ರೀ ಕಳವಳ

    ಮಂಡ್ಯ: ಬೆಂಗಳೂರು ವಿಸ್ತರಣೆಯಾಗುತ್ತಿದ್ದಂತೆ ರೈತರ ಜಮೀನು ಮತ್ತು ಜಾಗವೂ ವಶವಾಗುತ್ತದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
    ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘ ಇವರ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಬೆಂಗಳೂರು ಅಗಾಧವಾಗಿ, ವಿಸ್ತಾರವಾಗಿ ಬೆಳೆಯುತ್ತಿದೆ. ಮುಂದಿನ ಇಪ್ಪತ್ತೈದು ವರ್ಷಗಳ ನಂತರ ಬೆಂಗಳೂರಿನಲ್ಲಿ ೪ ಕೋಟಿ ಜನಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಆಗ ಮೂಲ ಸೌರ‍್ಯ ಒದಗಿಸುವುದು ತುಸು ತ್ರಾಸದಾಯಕವಾಗಿದೆ ಎಂದು ಹೇಳಿದರು.
    ಅಗಾಧವಾಗಿ ಬೆಳೆಯುವ ನಗರದ ನಿವಾಸಿಗಳಿಗೆ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರೈತರ ಜಮೀನು ಮತ್ತು ಜಾಗವೇ ಮೂಲವಾಗುತ್ತದೆ. ಅಂದು ಅವುಗಳು ಸರ್ಕಾರದ ವಶವಾಗುತ್ತವೆ. ನಾಡಪ್ರಭು ಕೆಂಪೇಗೌಡರು ಒಂದೇ ಸಮುದಾಯಕ್ಕೆ ಸೀಮಿತವಾಗಿರದೆ ಎಲ್ಲ ಸಮುದಾಯದ ಒಳಿತಿಗಾಗಿ ಶ್ರಮಿಸಿದ್ದಾರೆ. ಅವರು ಕಟ್ಟಿದ ಬೆಂಗಳೂರು ಇಂದು ಎಲ್ಲ ಸಮುದಾಯಗಳು ಅಭಿವೃದ್ಧಿಗೊಳ್ಳಲು ಸಾಧ್ಯವಾಗಿದೆ ಎಂದು ಅಭಿಪ್ರಾಯಿಸಿದರು.
    ಕೊಮ್ಮೇರಹಳ್ಳಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಎನ್. ಧನಂಜಯ, ಮಿಮ್ಸ್ ನಿರ್ದೇಶಕ ಡಾ. ಎಂ.ಆರ್. ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts