More

    ನ.11ಕ್ಕೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ: ಪ್ರಧಾನಿ ಮೋದಿಗಾಗಿ ಸಿದ್ಧವಾಯ್ತು ಪೇಟ

    ಬೆಂಗಳೂರು: ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣಗೊಳ್ಳಲಿದೆ.

    ನಾಡಪ್ರಭುಗಳ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಅವರಿಗೆ ಗೌರವಪೂರ್ವಕವಾಗಿ ತೊಡಿಸಲು ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವನ್ನು ಸಿದ್ಧಪಡಿಸಲಾಗಿದೆ. ಅದನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ಇಂದು ಹಸ್ತಾಂತರಿಸಲಾಯಿತು.

    ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಭಾಗ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣವಾಗಿದೆ. ಅಲ್ಲದೆ, 23 ಎಕರೆಯಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣವಾಗುತ್ತಿದೆ. 64 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಕಂಚಿನ ಪ್ರತಿಮೆಯ ಭಾಗವಾದ ಖಡ್ಗ 4 ಸಾವಿರ ಕೆಜಿ ತೂಕ ಹೊಂದಿದೆ. ನ.11ರಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿ: ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ

    ಕ್ವಾರಂಟೈನ್​ ಮುಗಿಸಿದ 2 ಚೀತಾಗಳನ್ನು ವಿಶಾಲ ಅರಣ್ಯ ಪ್ರದೇಶಕ್ಕೆ ಬಿಡುಗಡೆ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts