More

    ಕೆರಗೋಡು ಘಟನೆ: ಬೀದಿಗಳಿದ ಬಿಜೆಪಿ

    ಶಿವಮೊಗ್ಗ: ರಾಜ್ಯ ಸರ್ಕಾರ ರಾಜಕೀಯ ಲಾಭ ಪಡೆಯುವ ಸಲುವಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಸ್ಥಳೀಯರ ಆಶಯಕ್ಕೆ ವಿರುದ್ಧವಾಗಿ ಹನುಮಧ್ವಜವನ್ನು ತೆರವು ಮಾಡಿದೆ. ಇದನ್ನು ಪ್ರಶ್ನೆ ಮಾಡಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಸೋಮವಾರ ಐಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ವೈಫಲ್ಯ, ಪಕ್ಷ ಹಾಗೂ ಸರ್ಕಾರದೊಳಗಿನ ಆಂತರಿಕ ಭಿನ್ನಮತವನ್ನು ಮರೆಮಾಚಲು ಸರ್ಕಾರ ಇಂತಹ ಕೆಲಸಕ್ಕೆ ಮುಂದಾಗಿದೆ. ಕೆರಗೋಡಿನಲ್ಲಿ ರಾತ್ರೋರಾತ್ರಿ ಹಮನುಧ್ವಜ ತೆರವು ಮಾಡಲಾಗಿದೆ ಎಂದು ದೂರಿದರು.
    ಬಿಜೆಪಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮತ್ತೆ ಅದೇ ಜಾಗದಲ್ಲಿ ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು. ಸರ್ಕಾರ ನಮ್ಮ ಆಗ್ರಹಕ್ಕೆ ಮಣಿಯದೇ ಇದ್ದರೆ ಈಗ ಆರಂಭಿಸಿರುವ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
    ಪ್ರತಿಭಟನಾಕಾರರನ್ನು ಉದ್ದೇಶಿಸಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಮುಂತಾದವರು ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ, ಪಾಲಿಕೆ ಮಾಜಿ ಸದಸ್ಯರಾದ ಇ.ವಿಶ್ವಾಸ್, ರಾಹುಲ್ ಬಿದರೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿ ದೇವಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ಮುಂತಾದವರು ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts