VIDEO| ಕಾರು ಡಿಕ್ಕಿಗೆ ಹಾರಿಹೋದ ಮೂವರು ವಿದ್ಯಾರ್ಥಿನಿಯರು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ!

Girls Student Accident
Published on

ಕೊಚ್ಚಿನ್​: ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ನಡೆದು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ಆರು ಮಂದಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿರುವ ಘಟನೆ ಕೇರಳದ ಅಲೆಪ್ಪಿಯಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದ್ದು, ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ಕಾರು ಚಾಲಕನ ಬೇಜವಬ್ದಾರಿತನಕ್ಕೆ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?: ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದು ಕಾರು ಎಡಬದಿಯಲ್ಲಿ ಬೈಕ್‌ನಲ್ಲಿದ್ದ ಅನೀಶ್ ಮತ್ತು ಆತನ ಮಗನಿಗೆ ಮೊದಲು ಡಿಕ್ಕಿ ಹೊಡೆಯುತ್ತದೆ. ಬಳಿಕ ಬಲಗಡೆಯಲ್ಲಿ ಎದುರಿಗೆ ನಡೆದುಕೊಂಡು ಬರುತ್ತಿದ್ದ ಚಂದನಾ, ಅರ್ಚನಾ ಮತ್ತು ಸಾಗಿ ಎಂಬ ಮೂವರು ಪಿಯುಸಿ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆಯುತ್ತದೆ. ಬಳಿಕ ಸೈಕಲ್​ನಲ್ಲಿ ಹೋಗುತ್ತಿದ್ದ ಅನಘ ಎಂಬ ಬಾಲಕಿಗೂ ಗುದ್ದಿ ರಸ್ತೆ ಬದಿಯ ವಿದ್ಯುತ್​ ಕಂಬಕ್ಕಿ ಡಿಕ್ಕಿ ಹೊಡೆದು ನಿಲ್ಲುತ್ತದೆ.

ಮೂವರು ಪಿಯುಸಿ ವಿದ್ಯಾರ್ಥಿನಿಯರಲ್ಲಿ ಇಬ್ಬರು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಹೋಗಿ ಕಾಲುವೆ ನೀರಿಗೆ ಬಿದ್ದಿದ್ದಾರೆ. ಒಟ್ಟಾರೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ಲಂ ಎಂಬಾತ ಕಾರು ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದ್ದು, ಕಾರು ಚಾಲಕ ಮದ್ಯಪಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net