More

    ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕೇರಳ ಸಿಎಂ ಪಿಣರಾಯಿ ಪ್ರತಿಭಟನೆ

    ತಿರುವನಂತಪುರ: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಆಗುತ್ತಿರುವ ಮಲತಾಯಿ ಧೋರಣೆ ಸಂಬಂಧ ಹಾಗೂ ದಕ್ಷಿಣ ರಾಜ್ಯಗಳನ್ನು ಕೇಂದ್ರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಂಪುಟದ ಸಚಿವರು ಫೆಬ್ರವರಿ 8ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

    ಇದನ್ನೂ ಓದಿ:ಒಂದೇ ಕೈಯಲ್ಲಿ ಅದ್ಭುತವಾಗಿ ಫ್ಲೈಯಿಂಗ್ ಕ್ಯಾಚ್ ಹಿಡಿದ ಆಟಗಾರ; ವಿಡಿಯೋ ವೈರಲ್

    ಫೆ.8ರಂದು ಜಂತರ್ ಮಂತರ್​ನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷವಾದ ಕಾಂಗ್ರೆಸ್–ಯುಡಿಎಫ್‌ಗೂ ಆಹ್ವಾನ ನೀಡಲಾಗಿದೆ ಎಂದು ಎಲ್‌ಡಿಎಫ್‌ ಸಂಚಾಲಕ ಇ.ಪಿ.ಜಯರಾಜನ್ ಹೇಳಿದರು. ದೆಹಲಿಯಲ್ಲಿ ನಡೆಯುವ ಪ್ರತಿಭಟನೆ ಕುರಿತು ಕೇರಳದಲ್ಲಿ ಮನೆ ಮನೆಗಳಿಗೆ ಭೇಟಿ ಜನರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

    ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಹಾಗೂ ಉಪ ನಾಯಕ ಪಿ.ಕೆ.ಕುನ್ಹಲಿಕುಟ್ಟಿ ಅವರೊಂದಿಗೆ ಆನ್‌ಲೈನ್ ಮೂಲಕ ಸಮಾಲೋಚನೆ ನಡೆಸಿದ ಸಿಎಂ ಪಿಣರಾಯಿ ವಿಜಯನ್, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಆನೈಲೈನ್​ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

    ಧರಣಿಯಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗೆ ಸತೀಶನ್ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

    ರಾಜ್ಯದ ಎಲ್ಲಾ ಆರ್ಥಿಕ ಸಮಸ್ಯೆಗಳಿಗೂ ಕೇಂದ್ರವನ್ನು ದೂಷಿಸುವುದನ್ನು ವಿರೋಧ ಪಕ್ಷಗಳು ಒಪ್ಪುವುದಿಲ್ಲ. ತೆರಿಗೆ ಸಂಗ್ರಹ, ಚಿನ್ನದ ಮಾರಾಟ ಹಾಗೂ ಐಜಿಎಸ್‌ಟಿಯಲ್ಲಿ ರಾಜ್ಯದ ಪಾಲನ್ನು ಪಡೆಯುವಲ್ಲಿ ರಾಜ್ಯ ಸರ್ಕಾರದ ತಪ್ಪು ನಿರ್ವಹಣೆಯ ಪಾಲೂ ಇದೆ ಎಂದೂ ಸತೀಶನ್ ಸ್ಪಷ್ಟಪಡಿಸಿದ್ದಾರೆ.
    ತೆರಿಗೆ ಸಂಗ್ರಹದಲ್ಲಿ ರಾಜ್ಯ ಸರ್ಕಾರದ ದುರಾಡಳಿತ, ಚಿನ್ನದ ಮಾರಾಟ ಮತ್ತು ಐಜಿಎಸ್‌ಟಿಯ ತನ್ನ ಪಾಲನ್ನು ಪಡೆಯುವ ಸಮಸ್ಯೆಗಳು ಸೇರಿದಂತೆ ಆರ್ಥಿಕ ಸಂಕಷ್ಟಕ್ಕೆ ಇತರ ಕಾರಣಗಳನ್ನು ಸತೀಶನ್ ಹೇಳಿದ್ದಾರೆ.

    ಕೇಂದ್ರಕ್ಕೆ ನಿರಂತರವಾಗಿ ಪತ್ರ ಬರೆಯುತ್ತಲೇ ಇದ್ದರೂ ರಾಜ್ಯ ಸರ್ಕಾರದ ವಿರುದ್ಧದ ತಾತ್ಸಾರ ಮನೋಭಾವ ಕೊನೆಗೊಂಡಿಲ್ಲ. ಕೇಂದ್ರವು ರಾಜ್ಯ ಕುರಿತು ತನ್ನ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದೆ ಎಂದು ದೂರಿದ್ದಾರೆ.

    ಅಂದು ಬಾಲನಟಿ ಇಂದು ಹಾಲಿವುಡ್​ ಬ್ಯೂಟಿ! ಆವಂತಿಕಾ ನೋಡಿ ಹುಬ್ಬೇರಿಸಿದ ನೆಟ್ಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts