ನವದೆಹಲಿ: ರಾಷ್ಟ್ರದ ಮೊದಲ ಕೊರೊನಾ ವೈರಸ್ ಕೇರಳದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.
ಚೀನಾದಿಂದ ಕೇರಳಕ್ಕೆ ಬಂದ ವಿದ್ಯಾರ್ಥಿಯಲ್ಲಿ ವೈರಸ್ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ಪತ್ತೆಯಾಗಿದೆ. ಚೀನಾದ ವುವಾನ್ನಲ್ಲಿ ಈ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ವೈರಸ್ ಹರಡದಂತೆ ಎಲ್ಲ ರೀತಿಯ ಎಚ್ಚರಿಕೆ ವಹಿಸುವಂತೆ ಕೇರಳಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ.
ಚೀನಾದಕ್ಕೆ ಕೇರಳಕ್ಕೆ ಆಗಮಿಸುವ ವ್ಯಕ್ತಿಗಳನ್ನು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ ನಡೆಸಲು ಪ್ರಯೋಗಾಲಯಗಳನ್ನು ತೆರೆಯಲಾಗಿದೆ. (ಏಜೆನ್ಸೀಸ್)