More

    ಕೇರಳ ಸ್ಫೋಟ: ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್​ ಶಾ

    ತಿರುವನಂತಪುರಂ: ಕೇರಳದ ಕೊಚ್ಚಿ ಸಮೀಪದ ಕಲಮಸ್ಸೆರಿಯ ಕ್ರಿಶ್ಚಿಯನ್ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

    ಇದನ್ನೂ ಓದಿ: ಪಂಜಾಬ್​ನಲ್ಲಿ ಅಂಗಡಿ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ: ಬೈಕ್​ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ
    ಸ್ಫೋಟದ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದ ಕೇಂದ್ರ ಗೃಹ ಸಚಿವರು, ರಾಜ್ಯ ಸರ್ಕಾರಕ್ಕೆ ಅಗತ್ಯ ನೆರವು ನೀಡಲಾಗುವುದು. ತನಿಖಾ ಸಂಸ್ಥೆಗಳು ದುಷ್ಕರ್ಮಿಗಳನ್ನು ಪತ್ತೆಹಚ್ಚಲಿದ್ದಾರೆ ಎಂದು ಶಾ ತಿಳಿಸಿದ್ದಾರೆ.

    ಅವರ ನಿರ್ದೇಶನದ ಮೇರೆಗೆ ಭಯೋತ್ಪಾದನಾ ನಿಗ್ರಹ ಪಡೆ (ಎನ್‌ಎಸ್‌ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.

    ದಾಳಿಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು. ಸ್ಫೋಟಕಗಳನ್ನು ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

    3ಬಾರಿ ಸ್ಫೋಟ ಸಂಭವಿಸಿದ್ದು, ಕನ್ವೆನ್ಷನ್ ಸೆಂಟರ್‌ನಲ್ಲಿ ಸುಮಾರು 2,000 ಜನರಿದ್ದರು. ಮೊದಲನೆಯದು 9.43 ಕ್ಕೆ ಸ್ಫೋಟಿಸಿದ್ದರೆ, ಸ್ವಲ್ಪ ಸಮಯದ ನಂತರ 2 ನೇಯದು, ಬಳಿಕ ಮೂರನೇ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನು ಇಬ್ಬರು ಗಂಭೀರ ಹಾಗೂ 36 ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ ಅ.27ರಂದು ಆರಂಭವಾದ ಮೂರು ದಿನಗಳ ಯೆಹೋವನ ಸಾಕ್ಷಿಗಳ ಸಮಾವೇಶಕ್ಕೆ ಭಾನುವಾರ ಕೊನೆಯ ದಿನವಾಗಿತ್ತು.

    ಕೇರಳದ ಬಾಂಬ್​ ಸ್ಫೋಟ ಸ್ಥಳಕ್ಕೆ ಎನ್​ಐಎ ಎಂಟ್ರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts