ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಬರೀ ಲೈಂಗಿಕ ಕ್ರಿಯೆಯದ್ದೇ ಉಲ್ಲೇಖ

Sharone case
ಕೊಲೆಯಾದ ಶರೂನ್​ ರಾಜ್​ ಮತ್ತು ಪ್ರೇಯಸಿ ಗ್ರೀಷ್ಮಾ
Published on

ತಿರುವನಂತಪುರ: ಲವ್​ ಬ್ರೇಕಪ್​ ಮಾಡಿಕೊಳ್ಳಲು ಒಪ್ಪದ ಬಾಯ್​ಫ್ರೆಂಡ್​ಗೆ ಪ್ರೇಯಸಿಯೊಬ್ಬಳು ವಿಷವುಣಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಸಂಗತಿಗಳು ಬಯಲಾಗಿವೆ.

ನನ್ನೊಂದಿಗೆ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. 2022ರ ಅಕ್ಟೋಬರ್ 14 ರಂದು ವಿಷ ಬೆರೆಸಿದ ಔಷಧ ನೀಡಿದೆನು. ಅದೇ ದಿನ ಬೆಳಗ್ಗೆ ಮತ್ತೆ ಲೈಂಗಿಕ ಕ್ರಿಯೆಗಾಗಿ ಮನೆಗೆ ಬರುವಂತೆ ಬಲವಂತ ಮಾಡಿದ್ದನ್ನು ಎಂದು ಕೊಲೆ ಆರೋಪಿ ಗ್ರೀಷ್ಮಾ ಹೇಳಿಕೆ ನೀಡಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಐಸಿಯು ಬೆಡ್​ನಲ್ಲಿದ್ದ ಶರೋನ್ ರಾಜ್, ನನಗೆ ವಿಷವನ್ನು ನೀಡಿ ವಂಚನೆ ಮಾಡಿದ್ದಾಳೆ ಎಂದು ಸಂಬಂಧಿಕರಿಗೆ ಹೇಳಿದ್ದಾನೆ. ಈ ಎಲ್ಲ ಅಂಶಗಳನ್ನು ಪೊಲೀಸರು ಚಾರ್ಜ್​ಶೀಟ್​ನಲ್ಲಿ ದಾಖಲಿಸಿದ್ದು, ನೆಯ್ಯಟ್ಟಿಂಕರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

2022ರ ಅಕ್ಟೋಬರ್​ 13ರಂದು ಇಬ್ಬರು 1 ಗಂಟೆ 7 ನಿಮಿಷಗಳ ಕಾಲ ಸೆಕ್ಸ್​ ಬಗ್ಗೆ ಮಾತನಾಡಿದ್ದಾರೆ. ಸೆಕ್ಸ್​ಗಾಗಿ ಒತ್ತಾಯ ಮಾಡುತ್ತಿದ್ದರಿಂದ ಅಕ್ಟೋಬರ್​ 14ರಂದು ನಾನು ಗ್ರೀಷ್ಮಾ ಮನೆಗೆ ಹೋದೆ ಎಂದು ಶರೂನ್​ ತನ್ನ ಸಂಬಂಧಿಕರ ಮುಂದೆ ಹೇಳಿಕೊಂಡಿದ್ದಾನೆ. ಆಯುರ್ವೇದಿಕ್​ ಔಷಧದಲ್ಲಿ ವಿಷ ಬೆರೆಸಿ ನೀಡಿ ಕೊಲೆ ಮಾಡಿದ್ದಾಳೆ. ಬಳಿಕ ಆತನೊಂದಿಗೆ ನಡೆಸಿದ್ದ ಚಾಟ್​ ಅನ್ನು ಗ್ರೀಷ್ಮಾ ಡಿಲೀಟ್​ ಮಾಡಿದ್ದಾಳೆ. ಅಳಿಸಿದ ಸಂದೇಶಗಳನ್ನು ಹಿಂಪಡೆಯಬಹುದೇ ಎಂದು ನೋಡಲು ಅವಳು ಹಲವಾರು ಬಾರಿ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿ ಹುಡುಕಾಡಿದ್ದಾಳೆ.

ಏನಿದು ಘಟನೆ?

ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ನಿನ್ನೆ (ಅ.31) ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಅ. 14ರಂದು ಶರೋನ್​ ರಾಜ್​ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್​, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟಿದ್ದಾನೆ. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.

ಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಬಳಿಕ ಶರೂನ್​ ಜತೆ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್​ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ.​ ಬಳಿಕ ನವೆಂಬರ್‌ನಲ್ಲಿ ಶರೋನ್ ಅವರ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್‌ನಲ್ಲಿ ವಿವಾಹವಾದರು. ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್​ ಬುಕ್​ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್​ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್​ ಬ್ರೇಕಪ್​ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್​ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಶರೋನ್ ರಾಜ್​ ಅಕ್ಟೋಬರ್ 25ರಂದು ತಿರುವನಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು. ಇದು ಆತನ ಗೆಳತಿಯ ಪೂರ್ವಯೋಜಿತ ಕೊಲೆ ಎಂದು ಆತನ ಕುಟುಂಬದವರು ಆರೋಪಿಸಿ, ದೂರು ದಾಖಲಿಸಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net