Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News

ತುಂಬಿ ತುಳುಕಿದ ಕಪಿಲೆ: ಸುತ್ತೂರು ಜಲಾವೃತ ಡ್ರೋಣ್​ ಕ್ಯಾಮೆರಾದಲ್ಲಿ ಸೆರೆ

Monday, 13.08.2018, 4:44 PM       No Comments

ಮೈಸೂರು: ದೇವರನಾಡು ಕೇರಳದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರಾಜ್ಯದ ಕಬಿನಿ ಜಲಾಶಯಕ್ಕೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯದ ಹೊರಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ಹಲವೆಡೆ ಪ್ರವಾಹದ ಪರಿಸ್ಥಿತಿ ಮುಂದುವರಿದಿದೆ.

ನಂಜನಗೂಡು ತಾಲೂಕಿನ ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಗದ್ದೆಗಳಿಗೆ ಸಾಕಷ್ಟು ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಸುತ್ತೂರು ಶ್ರೀ ಕ್ಷೇತ್ರದ ಬಳಿ ಹಾದುಹೋಗುವ ಕಪಿಲಾ ನದಿ ತುಂಬಿ ತುಳುಕುತ್ತಿದ್ದು ಸೇತುವೆ ಮೇಲ್ಭಾಗದಲ್ಲಿ ಹರಿಯುತ್ತಿದೆ. ಡ್ರೋನ್ ಕ್ಯಾಮರಾದಲ್ಲಿ ಪ್ರವಾಹದ ದೃಶ್ಯಗಳು ಸೆರೆಯಾಗಿದ್ದು, ಗದ್ದೆಗಳ ಮೇಲೆಲ್ಲ ನೀರು ಹರಿಯುತ್ತಿದೆ. ಅಲ್ಲದೆ, ಪ್ರವಾಹ ದೃಶ್ಯಗಳನ್ನು ನೇರವಾಗಿ ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ನೆರೆದಿದ್ದರು.

Leave a Reply

Your email address will not be published. Required fields are marked *

Back To Top