More

    ಕೇರಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ಕರ್ನಾಟಕ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ

    ಕಾಸರಗೋಡು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಎಸ್‌ಎಸ್‌ಎಲ್‌ಸಿ, ವೊಕೇಶನಲ್ ಹೈಯರ್ ಸೆಕೆಂಡರಿ ಪರೀಕ್ಷೆಗಳು ಮಂಗಳವಾರ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿರ್ದೇಶನಗಳೊಂದಿಗೆ ಆರಂಭಗೊಂಡವು.

    ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳ ಹೊರಗೆ ಸ್ಯಾನಿಟೈಸರ್ ಬಳಸಿದ ನಂತರ, ದೇಹದ ಉಷ್ಣತೆ ಪರಿಶೋಧಿಸಿ ಕೊಠಡಿಯೊಳಗೆ ಬಿಡಲಾಯಿತು. ಸಾಮಾಜಿಕ ಅಂತರ ಪಾಲನೆಯೊಂದಿಗೆ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಕುಳ್ಳಿರಿಸಲಾಗಿತ್ತು. ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಬೆಳಗ್ಗೆ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲಾ ಪರೀಕ್ಷೆ ಜಿಲ್ಲೆಯ 22 ಕೇಂದ್ರಗಳಲ್ಲಿ ನಡೆದಿದ್ದು, ಇದರಲ್ಲಿ 2,434 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

    ಮಧ್ಯಾಹ್ನ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 19 ಕೇಂದ್ರಗಳಲ್ಲಿ 10,760 ಮಂದಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 1,738 ಮಂದಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದಿಂದ ಆಗಮಿಸಬೇಕಾಗಿದ್ದ 32 ಮಂದಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನವರೆಗೆ ಎಸ್ಸೆಸ್ಸೆಲ್ಸಿ ಹಾಗೂ ಹೈಯರ್ ಸೆಕೆಂಡರಿಯ 246 ಮಂದಿ ವಿದ್ಯಾರ್ಥಿಗಳು ಕರ್ನಾಟಕದಿಂದ ತಲಪಾಡಿ ಗಡಿ ಮೂಲಕ ಜಿಲ್ಲೆಗೆ ಆಗಮಿಸಿದ್ದರು.

    ಕರ್ನಾಟಕದಿಂದ ಬಂದವರಿಗೆ ಕ್ವಾರಂಟೈನ್: ಕರ್ನಾಟಕದಲ್ಲಿ ಕ್ವಾರಂಟೈನ್ ಹೊಂದಿದ ಮನೆಗಳಿಂದ ಆಗಮಿಸಿದವರನ್ನು ಕೊಠಡಿಯೊಳಗೆ ಪ್ರತ್ಯೇಕವಾಗಿರಿಸಿ ಪರೀಕ್ಷೆ ನಡೆಸಲಾಗಿದೆ. ಉಳಿದವರನ್ನು ಸಾಮಾಜಿಕ ಅಂತರ ಪಾಲನೆಯೊಂದಿಗೆ ಪರೀಕ್ಷಾ ಕೊಠಡಿಗಳಲ್ಲಿರಿಸಲಾಗಿತ್ತು. ನಂತರ ಇವರನ್ನು ಅವರ ಮನೆ, ಹಾಸ್ಟೆಲ್ ಅಥವಾ ಶಾಲೆಗಳಲ್ಲಿ ಪ್ರತ್ಯೇಕ ಕ್ವಾರಂಟೈನ್ನಲ್ಲಿರಿಸುವ ವ್ಯವಸ್ಥೆ ಮಾಡಲಾಯಿತು. ಮೇ 30ರವರೆಗೆ ಪರೀಕ್ಷೆಗಳು ನಡೆಯಲಿದೆ. ಹೈಯರ್ ಸೆಕೆಂಡರಿ ಪರೀಕ್ಷೆಗಳು ಮೇ 27ರಿಂದ ಆರಂಭಗೊಳ್ಳಲಿವೆ. ಈ ಪರೀಕ್ಷೆಗೆ ಹಾಜರಾಗಬೇಕಿರುವವರಲ್ಲಿ 204 ಮಂದಿ ಕರ್ನಾಟಕದಲ್ಲಿ ಉಳಿದುಕೊಂಡಿದ್ದಾರೆ. 30 ಮಂದಿ ಸ್ವಂತ ಹೊಣೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಆಗಿಸುವುದಾಗಿ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಈವರೆಗೆ 93 ಮಂದಿ ಮಕ್ಕಳು ತಲಪಾಡಿ ಗಡಿ ಮೂಲಕ ಜಿಲ್ಲೆಗೆ ಆಗಮಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts