ಕೆಸರುಗದ್ದೆ ಕ್ರೀಡಾಕೂಟ ಪೂರ್ವಭಾವಿ ಸಭೆ

New Project (6)
Published on

ಸುಳ್ಯ: ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಮತ್ತು ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜುಲೈ 20ರಂದು ಸುಳ್ಯದ ಬೂಡು ಶ್ರೀ ಭಗವತಿ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರ‌್ಡೊಂಜಿ ದಿನ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯಲ್ಲಿ ಶಾರದಾಂಬಾ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ವಹಿಸಿದ್ದರು.

ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ರೋಟರಿ ಕ್ಲಬ್ ಅಧ್ಯಕ್ಷ ರಾಮ್ ಮೋಹನ್, ಲಯನ್ಸ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಮಾತನಾಡಿದರು. ಗೌರವ ಸಲಹೆಗಾರ ಎನ್.ಜಯಪ್ರಕಾಶ್ ರೈ ಸಲಹೆ ಸೂಚನೆ ನೀಡಿದರು. ಶಾರದಾಂಬಾ ಸೇವಾ ಸಮಿತಿ ಕೋಶಾಧಿಕಾರಿ ಅಶೋಕ್ ಪ್ರಭು, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಶಾರದಾಂಬಾ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶಾರದಾಂಬಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನೀಲ್ ಕೇರ್ಪಳ ಮೊದಲಾದವರಿದ್ದರು. ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ ನಿರೂಪಿಸಿದರು. ದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನೀಲ್ ಕೇರ್ಪಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net