ಭಾರತ ವಿರುದ್ಧ ಏಕದಿನ ಸರಣಿಗೆ ಆಸೀಸ್ ತಂಡ ಪ್ರಕಟ: ತಂಡಕ್ಕೆ ಮರಳಿದ ಸ್ಟಾರ್ ವೇಗಿ

New-Project-19-1
Published on

ಮೆಲ್ಬೋರ್ನ್: ವಿಶ್ವಕಪ್ ಏಕದಿನ ಟೂರ್ನಿಗೆ ಮುನ್ನ ಐಸಿಸಿ ಏಕದಿನ ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲು ಮಹತ್ವದ ಸರಣಿ ಎನಿಸಿರುವ ಮುಂಬರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಗೆ ಪ್ರವಾಸಿ ಆಸ್ಟ್ರೇಲಿಯಾ ತಂಡ 18 ಆಟಗಾರರ ಆಯ್ಕೆ ಮಾಡಿದೆ. ದ. ಆಫ್ರಿಕಾ ವಿರುದ್ಧ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಸ್ಟೀವನ್ ಸ್ಮಿತ್, ನಾಯಕ ಪ್ಯಾಟ್ ಕಮ್ಮಿನ್ಸ್, ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ವಾಪಸ್ ಆಗಿದ್ದಾರೆ. ಎಡಗೈ ಮೂಳೆ ಮುರಿತಕ್ಕೆ ಒಳಗಾಗಿರುವ ಟ್ರಾವಿಸ್ ಹೆಡ್ ಸರಣಿಯಿಂದ ಹೊರಬಿದ್ದಿದ್ದಾರೆ. ಸೆಪ್ಟೆಂಬರ್ 24, 28 ಮತ್ತು ಅಕ್ಟೋಬರ್ 1 ರಂದು ಕ್ರಮವಾಗಿ ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ಪಂದ್ಯಗಳು ನಡೆಯಲಿವೆ.

ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವನ್ ಸ್ಮಿತ್, ಸೀನ್ ಅಬೋಟ್, ಅಲೆಕ್ಸ್ ಕ್ಯಾರಿ (ವಿ.ಕೀ), ನಥಾನ್ ಎಲ್ಲಿಸ್, ಕ್ಯಾಮರಾನ್ ಗ್ರೀನ್, ಜೋಸ್ ಹ್ಯಾಜಲ್‌ವುಡ್, ಜೋಶ್ ಇಂಗ್ಲೀಸ್ (ವಿ,ಕೀ), ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಿಸ್, ಡೇವಿಡ್ ವಾರ್ನರ್, ಆಡಂ ಝಂಪಾ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net