ಕೆಎಫ್‌ಡಿಸಿ ಅಧ್ಯಕ್ಷ ಐವರ್ನಾಡು ರಬ್ಬರ್ ಫ್ಯಾಕ್ಟರಿಗೆ ಭೇಟಿ

Sul_Rubber
Published on

ಸುಳ್ಯ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ)ದ ಅಧ್ಯಕ್ಷ ಬಸವರಾಜ ನೀಲಪ್ಪ ಶಿವಣ್ಣನವರ್ ಮಂಗಳವಾರ ಐವರ್ನಾಡು ರಬ್ಬರ್ ಫ್ಯಾಕ್ಟರಿಗೆ ಭೇಟಿ ನೀಡಿದರು. ಕೆಎಫ್‌ಡಿಸಿಯ ವಿವಿಧ ರಬ್ಬರ್ ಪ್ಲಾಂಟೇಷನ್, ರಬ್ಬರ್ ಫ್ಯಾಕ್ಟರಿಗಳಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದರಲ್ಲದೆ ರಬ್ಬರ್ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿದರು.

ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಮಿಕ ಮುಖಂಡರ ಜೊತೆ ಮಾತುಕತೆ ನಡೆಸಿದರು. ಕಾರ್ಮಿಕರಿಗೆ ಶೇ.20 ಬೋನಸ್ ನೀಡಬೇಕು, ಕಾರ್ಮಿಕರ ಮನೆಗಳು ನಾದುರಸ್ತಿಯಲ್ಲಿದ್ದು ಹೊಸ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಕೆಎಫ್‌ಡಿಸಿ ಅಧ್ಯಕ್ಷರಿಗೆ ಮನವಿ ಮಾಡಿದರು. ಕಾರ್ಮಿಕ ಮುಖಂಡರು ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಮನವಿ ಸಲ್ಲಿಸಿದರು.

ಕೆಎಫ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ನ.ಪಂ.ಸದಸ್ಯ ಸಿದ್ದಿಕ್ ಕೊಕ್ಕೊ, ಕಾರ್ಮಿಕ ಮುಖಂಡರಾದ ಆನಂದ ರಾಮಸ್ವಾಮಿ, ಶಂಕರಲಿಂಗಂ, ಜೀವರತ್ನ, ಅಣ್ಣಾದೊರೈ, ಸುಂದರಲಿಂಗಂ, ಲೋಕನಾಥ್ ಗಣೇಶನ್ ನಾಗಪಟ್ಟಣ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net