More

    ಮುಖ್ಯಮಂತ್ರಿ, ಕಾರ್ಮಿಕ ಸಚಿವರನ್ನು ಭೇಟಿ ಮಾಡಿದ ಚಿತ್ರರಂಗದ ನಿಯೋಗ

    ಲಾಕ್‌ಡೌನ್‌ನಿಂದ ಚಿತ್ರರಂಗದ ನೂರಾರು ದಿನಗೂಲಿ ನೌಕರರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರರಂಗದ ನಿಯೋಗವೊಂದು ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ, ಒಂದಿಷ್ಟು ಮನವಿ ಸಲ್ಲಿಸಿದೆ. ಮನವಿ ಸ್ವೀಕರಿಸಿರುವ ಮುಖ್ಯಮಂತ್ರಿಗಳು ಮತ್ತು ಕಾರ್ಮಿಕ ಸಚಿವರು, ಸೂಕ್ತ ಕ್ರಮ ಕೈಗೊಳ್ಳುವ ಆಶ್ವಾಸನೆಯನ್ನು ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ‘ಇಂದು ಕಾರ್ಮಿಕ ಸಚಿವರನ್ನು ಭೇಟಿಯಾಗಿ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಸಹಾಯ ಮಾಡಬೇಕೆಂದು ಕೇಳಿಕೊಂಡಿದ್ದೇವೆ. ಹಾಗೆಯೇ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಿ, ಚಿತ್ರರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತು ಗಮನಸೆಳೆದಿದ್ದೇವೆ. ಸಮಸ್ಯೆಯನ್ನು ಆಲಿಸಿರುವ ಮುಖ್ಯಮಂತ್ರಿಗಳು ಇನ್ನು ಎರಡ್ಮೂರು ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಆಶ್ವಾಸನೆ ನೀಡಿದ್ದಾರೆ’ ಎಂದು ಹೇಳಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮಾತನಾಡಿ, ‘ಚಿತ್ರರಂಗದಲ್ಲಿ ಆರು ಸಾವಿರ ಕಾರ್ಮಿಕರಿದ್ದಾರೆ. ಈ ಲಾಕ್‌ಡೌನ್‌ನಿಂದ ಬಹಳಷ್ಟು ಜನರಿಗೆ ಸಮಸ್ಯೆಯಾಗಿದೆ. ಅವರಿಗೆ ಆಹಾರ ಧಾನ್ಯ ವಿತರಿಸುವಂತೆ ಅಥವಾ ಧನಸಹಾಯ ಮಾಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ’ ಎಂದು ತಿಳಿಸಿದರು.
    ಈ ನಿಯೋಗದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್‌ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಕಾರ್ಮಿಕರ ಮತ್ತು ತಂತ್ರಜ್ಞರ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್ ಮುಂತಾದವರಿದ್ದರು.

    ತಿಥಿ ಮಾಡಬೇಕಾಗಿರೋದು ಕರೊನಾಕ್ಕೆ … ಜನರಿಗೆ ಜಾಗೃತವಾಗಿರಲು ಕರೆ ನೀಡಿದ ಕ್ರೇಜಿ ಸ್ಟಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts