

ಬೆಂಗಳೂರು: ಯಶ್ ಅಭಿನಯದ ‘ಕೆಜಿಎಫ್ 2’ ಚಿತ್ರ ಯಾವಾಗ ಬಿಡುಗಡೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಚಿತ್ರವು 2022ರ ಏಪ್ರಿಲ್ 14ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ವಿಷಯವನ್ನು ಯಶ್ ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಚಿತ್ರದ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಅವತರಣಿಕೆಗಳ ಸ್ಯಾಟಿಲೈಟ್ ಹಕ್ಕುಗಳನ್ನು ಜೀ ಟಿವಿಗೆ ಮಾರಾಟ ಮಾಡಲಾಗಿರುವ ಸುದ್ದಿ ಬಂದಿತ್ತು. ಇದೀಗ ಚಿತ್ರದ ಬಿಡುಗಡೆಯ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
'ಕೆಜಿಎಫ್ 2' ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಮುಂತಾದವರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.