VIDEO | ಬಸ್ ಚಲಾಯಿಸಿ ಗಮನ ಸೆಳೆದ ಕೆಜಿಎಫ್ ಶಾಸಕಿ ರೂಪಕಲಾ!

Roopakala MLA
Published on

ಕೆಜಿಎಫ್(ಕೋಲಾರ): ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಗೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು. ಈ ವೇಳೆ ಅವರು ಅವರು ಬಸ್ ಚಲಾಯಿಸಿ ಅಲ್ಲಿದ್ದವರ ಗಮನ ಸೆಳೆದರು.

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡುತ್ತಿದ್ದಂತೆ, ಅಲ್ಲಿದ್ದ ಕಾರ್ಯಕರ್ತರು ಬಸ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಕೊನೆಗೆ ಎಲ್ಲರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ ಚಲಾಯಿಸಲು ಮುಂದಾದರು. ಅವರಿಗೆ ಬಸ್ಸಿನ ಚಾಲಕ ಮಾರ್ಗದರ್ಶನ ಮಾಡಿದರು.

ಬೆಂಬಲಿಗರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ಸು ಚಲಾಯಿಸಲು ಮುಂದಾಗಿದ್ದಾರೆ. ಈ ವೇಳೆ ಆರಂಭದಲ್ಲಿ ಗೇರ್ ಸರಿಯಾಗಿ ಬೀಳದೆ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಇದರಿಂದ ಹಿಂಭಾಗದಲ್ಲಿ ಇನ್ನೊಂದು ಬಸ್ಸಿಗೆ ಡಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೊಂಡಿದ್ದಾರೆ. ಕೊನೆಗೆ ಶಾಸಕಿ ರೂಪಕಲಾ ಬಸ್​ನಲ್ಲಿ ಕುಳಿತು ಸ್ವಲ್ಪ ದೂರ ಪ್ರಯಾಣಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net