ಕೆಜಿಎಫ್‌ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ ಯೋಜನಾ ವರದಿ ಸಿದ್ಧಪಡಿಸಲು ಭೈರತಿ ಸೂಚನೆ

blank

 

ಬೆಂಗಳೂರು:
ಕೆಜಿಎಫ್‌ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿ ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು, ಕೆಜಿಎಫ್ ಮತ್ತು ಬಂಗಾರಪೇಟೆ ತಹಶೀಲ್ದಾರ್ ಹಾಗೂ ಕೆಜಿಎಫ್ ನಗರಾಭಿವೃದ್ಧಿ ಆಯುಕ್ತರು ಹಾಗೂ ನಗರ ಯೋಜನಾ ಆಯುಕ್ತರ ಸಭೆಯಲ್ಲಿ ಮಾತನಾಡಿದರು.
ಸಿಎಂ ಬಜೆಟ್‌ನಲ್ಲಿ ೋಷಿಸಿದ್ದಂತೆ ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಪಟ್ಟಣದಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾರ್ಯ ಸಾಧ್ಯತೆಯ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸಚಿವರು ಸೂಚಿಸಿದರು.
ಬಿ.ಜಿ.ಎಂ.ಎಲ್ ಸುಪರ್ಧೀಯಲ್ಲಿ ರಾಜ್ಯ ಸರ್ಕಾರದ ಸುಮಾರು 960 ಎಕರೆ ಜಮೀನು ಇದ್ದು, ಇದರಲ್ಲಿ ಕೆ.ಜಿ.ಎಫ್ ತಾಲ್ಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ. 3 ರಲ್ಲಿ 294 ಎಕರೆ ಜಾಗವನ್ನು ಗುರುತಿಸಲಾಗಿದೆ. ಕೆಲವು ಎಕರೆ ಜಾಗ ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ ಜಮೀನನ್ನು ಪಡೆಯಲು ಕ್ರಮ ವಹಿಸಲಾಗಿದೆ ಎಂದರು.
ಚೆನೈ-ಬೆಂಗಳೂರು ಎಕ್ಸ್‌ಪ್ರೇಸ್ ಹೆದ್ದಾರಿ ಕೆ.ಜಿ.ಎಫ್ ಮೂಲಕ ಹಾದು ಹೋಗಿದ್ದು, ಈ ಯೋಜನೆಯ ಜಾಗದಿಂದ 2.5 ಕಿ.ಮೀ ಅಂತರದಲ್ಲಿದೆ. ಎಕ್ಸ್‌ಪ್ರೇಸ್ ಹೆದ್ದಾರಿಯಿಂದ ಟೌನ್‌ಶಿಪ್‌ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯತೆ ಬಗ್ಗೆ ಪರಿಶೀಲಿಸಿ ಎಂದು ಸಚಿವರು ಸೂಚಿಸಿದರು.
ಯೋಜನೆ ನಿರ್ಮಾಣ ಮಾಡಲು ತಗಲುವ ವೆಚ್ಚ ಮತ್ತು ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಸೂಚಿಸಿದರು.
ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್‌ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಲಭ್ಯವಾಗಲಿದೆ ಎಂದರು.
ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಎಂ.ದೀಪ, ಕೆ.ಯು.ಐ.ಡಿ.ಎ್.ಸಿ ವ್ಯವಸ್ಥಾಪಕ ನಿರ್ದೇಶಕರು ಬಿ.ಶರತ್, ಮುಖ್ಯ ಅಭಿಯಂತರ ನಂದೀಶ್ ಕುಮಾರ್, ತಹಸೀಲ್ದಾರ್, ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:
Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…