ಎನ್‌ಐಎಗೆ ಬೇಕಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಹತ್ಯೆ

Hardeep Singh Nijjar
Published on

ಕೆನಡಾ: ವಿವಿಧ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಭಾರತ ಸರ್ಕಾರದಿಂದ 'ವಾಂಟೆಡ್ ಟೆರರಿಸ್ಟ್'(wanted terrorist) ಎಂದು ಘೋಷಿಸಲ್ಪಟ್ಟಿದ್ದ ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಪಂಜಾಬಿ ಪ್ರಾಬಲ್ಯವಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್​ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಎಂಬ ಪ್ರತ್ಯೇಕತಾವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ. ಕೆನಡಾದಲ್ಲಿ ನೆಲೆಸಿದ್ದ ನಿಜ್ಜರ್​ ಕೆಟಿಎಫ್ ಮುಖ್ಯಸ್ಥನಾಗಿದ್ದ. ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಚಾರ್ಜ್‌ಶೀಟ್ ಸಲ್ಲಿಸಿತ್ತು.

ಇತ್ತೀಚೆಗೆ ಭಾರತ ಸರ್ಕಾರ ಬಿಡುಗಡೆ ಮಾಡಿದ 40 ವಾಂಟೆಡ್ ಟೆರರಿಸ್ಟ್​ಗಳ ಪಟ್ಟಿಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್​ ಹೆಸರು ಸೇರಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಅರ್ಚಕರೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ನಿಜ್ಜರ್​ನ ಸುಳಿಸು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net