More

    ಕೇಜ್ರಿವಾಲ್​ಗೆ ಮತ್ತೊಂದು ಸಂಕಷ್ಟ: ಖಲಿಸ್ತಾನಿ ಸಂಘಟನೆಗಳಿಂದ 133 ಕೋಟಿ ರೂ. ಪಡೆದ ಆರೋಪ

    ನವದೆಹಲಿ: ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಮ್​ ಆದ್ಮಿ ಪಾರ್ಟಿಯು 2014 ರಿಂದ 2022ರ ನಡುವೆ ಖಲಿಸ್ತಾನಿ ಸಂಘಟನೆಗಳಿಂದ ಸುಮಾರು 16 ಮಿಲಿಯನ್​ ಡಾಲರ್​ (ಅಂದಾಜು 133.54 ಕೋಟಿ ರೂ.) ಪಡೆದಿದೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಗಂಭೀರ ಆರೋಪ ಮಾಡಿದ್ದಾನೆ.

    ವಿಡಿಯೋ ಬಿಡುಗಡೆ ಮಾಡಿರುವ ಗುರುಪತ್ವಂತ್ ಸಿಂಗ್ ಪನ್ನುನ್, 2014 ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹಣಕ್ಕಾಗಿ ಶಿಕ್ಷೆಗೊಳಗಾದ ಭಯೋತ್ಪಾದಕ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ಅವರನ್ನು ಬಿಡುಗಡೆ ಮಾಡಲು ಪ್ರಸ್ತಾವನೆ ಒಂದನ್ನು ಮುಂದಿಟ್ಟರು ಎಂದು ಪನ್ನುನ್​ ಇದೇ ಸಂದರ್ಭದಲ್ಲಿ ಆರೋಪಿಸಿದ್ದಾನೆ.

    ಆರೋಪಿ ಬುಲ್ಲರ್​ 1993ರಲ್ಲಿ ನಡೆದ ದೆಹಲಿ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಶಾಮೀಲಾಗಿದ್ದ. ಈ ಸ್ಫೋಟದಲ್ಲಿ 9 ಮಂದಿ ಸಾವಿಗೀಡಾಗಿ 31 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

    ಅಂದಹಾಗೆ ಭಾರತೀಯ ಮೂಲದ ಪನ್ನುನ್​, ಯುಎಸ್​ ಮತ್ತು ಕೆನಡಾದ ದ್ವಿಪೌರತ್ವವನ್ನು ಹೊಂದಿದ್ದಾನೆ. ಸೋಮವಾರ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಈ ಗಂಭೀರ ಆರೋಪಗಳನ್ನು ಮಾಡಿದ್ದಾನೆ. ಕೇಜ್ರಿವಾಲ್ ಮತ್ತು ಅವರ ಪಕ್ಷದ ವಿರುದ್ಧ ಪನ್ನುನ್​​ ಆರೋಪ ಇದೇ ಮೊದಲೇನಲ್ಲ. ಕಳೆದ ಜನವರಿಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್​ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್, ಯುಎಸ್ ಮತ್ತು ಕೆನಡಾದಲ್ಲಿನ ಖಲಿಸ್ತಾನ್ ಬೆಂಬಲಿಗರಿಂದ 6 ಮಿಲಿಯನ್ ಡಾಲರ್​ ದೇಣಿಗೆ ಪಡೆದು, ಪಂಜಾಬ್‌ನಲ್ಲಿನ ತಮ್ಮ ಚಟುವಟಿಕೆಗಳಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಭರವಸೆ ನೀಡಿದ್ದರು ಎಂದು ಪನ್ನುನ್​ ಹೇಳಿದ್ದಾರೆ.

    ಯಾರು ಈ ಪನ್ನುನ್​
    ಪಂಜಾಬ್​ನ ಅಮೃತಸರದಲ್ಲಿ ಹುಟ್ಟಿದ ಪನ್ನುನ್​, 2019ರಲ್ಲಿ ಮೊದಲ ಪ್ರಕರಣ ದಾಖಲಾದಾಗಿನಿಂದ ರಾಷ್ಟ್ರೀಯ ತನಿಖಾ ದಳ (ಎನ್​ಐಎ)ದ ಕಣ್ಗಾವಲಿನಲ್ಲಿ ಇದ್ದಾನೆ. ಭಯೋತ್ಪಾದಕ ಕೃತ್ಯಗಳು ಮತ್ತು ಚಟುವಟಿಕೆಗಳನ್ನು ಸಮರ್ಥಿಸುವ ಮತ್ತು ನಿಯೋಜಿಸುವಲ್ಲಿ ಪ್ರಾಥಮಿಕ ಪಾತ್ರವನ್ನು ವಹಿಸಿದ್ದಾನೆ ಮತ್ತು ಪಂಜಾಬ್ ಮತ್ತು ಭಾರತದ ಇತರ ಭಾಗಗಳಲ್ಲಿ ಬೆದರಿಕೆ ತಂತ್ರಗಳ ಮೂಲಕ ಭಯ ಮತ್ತು ಭಯೋತ್ಪಾದನೆಯನ್ನು ಹರಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2021ರ ಫೆಬ್ರವರಿ 3ರಂದು ಪನ್ನುನ್​ ವಿರುದ್ಧ ಎನ್​ಐಎ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ. ಆತನನ್ನು ಘೋಷಿತ ಅಪರಾಧಿ ಎಂದು ಕಳೆದ ವರ್ಷ ನವೆಂಬರ್​ 29ರಂದು ಸರ್ಕಾರ ಘೋಷಣೆ ಮಾಡಿದೆ.

    ಇನ್ನೂ ಇದೇ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ದೆಹಲಿ ಅಬಕಾರಿ ಮದ್ಯ ಹಗರಣದಲ್ಲಿ ಸಿಲುಕಿಕೊಂಡಿದ್ದು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಾರೆ. ಬಂಧನದಿಂದ ರಕ್ಷಣೆ ಕೋರಿದರೂ, ದೆಹಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು, ಮಾರ್ಚ್ 28 ರವರೆಗೆ ಕೇಜ್ರಿವಾಲ್​, ಇಡಿ ಕಸ್ಟಡಿಯಲ್ಲಿ ಇರಲಿದ್ದಾರೆ. (ಏಜೆನ್ಸೀಸ್​)

    ಮೊದಲ ಪಂದ್ಯದಲ್ಲೇ ಹಾರ್ದಿಕ್​ ಅಟ್ಟರ್​ಫ್ಲಾಪ್​! ಮುಂಬೈ ಸೋಲಿಗೆ ಪ್ರಮುಖ ಕಾರಣಗಳು ಹೀಗಿವೆ…

    ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿದೆ ಬಿಲಿಯನೇರ್‌ಗಳ ಸಂಖ್ಯೆ…ಕಳೆದ ಐದು ವರ್ಷಗಳಲ್ಲಿ ಈ ಸಂಖ್ಯೆ ಸುಮಾರು 76% ಹೆಚ್ಚಳ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts