ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಬಿಜೆಪಿ ಮುಖಂಡರು

ಯಾದಗಿರಿ: ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಗುರುವಾರ ಬಿಜೆಪಿ ಪ್ರಮುಖರು ಭೇಟಿ ನೀಡಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ ನಾಯಕ್ ಪರ ಪ್ರಚಾರ ನಡೆಸಿದರು.

ಪಕ್ಷದ ಪ್ರನಾಳಿಕೆಯನ್ನು ಮತದಾರರಿಗೆ ವಿತರಿಸಿ ಮಾತನಾಡಿ, ಕಳೆದ 5 ವರ್ಷಗಳಿಂದ ದೇಶದ ಸುರಕ್ಷತೆಯಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಮುತುವರ್ಜಿ ವಹಿಸಿದ್ದು, ವಿಶ್ವದ ಅನೇಕ ರಾಷ್ಟ್ರಗಳು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವೀಕರಿಸಿದ್ದಾರೆ. ಬಿಜೆಪಿ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಹಿತ ಕಾಪಾಡುವ ಕೆಲಸ ಮಾಡಿದ್ದು, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕಿದೆ ಎಂದರು.

ಪಕ್ಷದ ಅಭ್ಯರ್ಥಿ ರಾಜಾ ಅಮರೇಶ ನಾಯಕ್ ಈಗಾಗಲೇ ಶಾಸಕ ಮತ್ತು ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿದ್ದು ಜನಸಾಮಾನ್ಯರೊಂದಿಗೆ ಬೆರೆಯುತ್ತಾರೆ. ಹೀಗಾಗಿ ಮತದಾರರು ಅವರಿಗೆ ಆಶೀರ್ವದಿಸುವಂತೆ ಕೋರಿದರು.
ಪ್ರಮುಖರಾದ ಲಲಿತಾ ಅನಪುರ, ದೇವರಾಜ ನಾಯಕ್ ಇದ್ದರು.

Leave a Reply

Your email address will not be published. Required fields are marked *