More

    ರಾಜ್ಯಸಭೆ ಚುನಾವಣೆಗೆ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ: ಎಐಸಿಸಿ ಅಧಿಕೃತ ಘೋಷಣೆ

    ಕಲಬುರಗಿ: ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.

    ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಖರ್ಗೆ ಅವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿದೆ.

    ಇದನ್ನೂ ಓದಿ ಹಂಪಿಯಲ್ಲಿ ಭೂಕಂಪ ಸಂಭವಿಸಿಲ್ಲ ಎಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

    ಕಾಂಗ್ರೆಸ್‌ಗೆ ರಾಜ್ಯಸಭೆಯಲ್ಲಿ ಮೋದಿ ಸರ್ಕಾರವನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವುಳ್ಳ ಅನುಭವಿ ನಾಯಕರ ಅಗತ್ಯವಿರುವ ಹಿನ್ನೆಲೆಯಲ್ಲಿ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಕೆಲ ನಾಯಕರ ಬೆಂಬಲವೂ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

    ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಗಳಿಸಿದ್ದ ಖರ್ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಡಾ. ಉಮೇಶ್ ಜಾಧವ್ ಅವರು ಖರ್ಗೆ ಅವರನ್ನು ಪರಾಭವಗೊಳಿಸಿದ್ದರು. ಹೀಗಾಗಿ ರಾಜ್ಯಸಭೆ ಮೂಲಕ ದೆಹಲಿ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಖರ್ಗೆ ಮುಂದಾಗಿದ್ದಾರೆ.

    ಇದನ್ನೂ ಓದಿ ಕಳ್ಳತನ ಇಲ್ಲವೇ ಭಿಕ್ಷೆ ಬೇಡಿಯಾದ್ರೂ ಲ್ಯಾಪ್​ಟಾಪ್ ​ತಗೋಬೇಕಂತೆ.. ವಿದ್ಯಾರ್ಥಿಗಳಿಗೆ ಪ್ರೊಫೆಸರ್​ ವಾರ್ನಿಂಗ್!

    ರಾಜ್ಯಸಭಾ ಚುನಾವಣೆ: ಪಕ್ಷದಿಂದ ಯಾವ ಆದೇಶ ಬರುತ್ತದೋ ಅದನ್ನು ಪಾಲಿಸುತ್ತೇನೆ- ಡಾ. ವಿಜಯ ಸಂಕೇಶ್ವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts