More

  ‘ಪ್ರಧಾನಿ ಮೋದಿ ಸೋಲು ಖಚಿತ’: ಖರ್ಗೆ

  ಲಖನೌ: ಜೂನ್ 4 ರಂದು ಕೇಂದ್ರದಲ್ಲಿ ‘ಭಾರತ’ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ!

  ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದರು.

  ಇದುವರೆಗೆ ಪೂರ್ಣಗೊಂಡಿರುವ ನಾಲ್ಕು ಹಂತದ ಮತದಾನದಲ್ಲಿ ವಿಪಕ್ಷಗಳ ಮೈತ್ರಿಕೂಟ ಗಟ್ಟಿಯಾಗಿ ನಿಂತಿದ್ದು. ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಸಿದ್ಧರಾಗಿದ್ದಾರೆ ಎಂದರು.

  ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಈ ಚುನಾವಣೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಹೇಳಿದರು.

  ದೇಶದ ಭವಿಷ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪ್ರಜಾಪ್ರಭುತ್ವ ಇಲ್ಲದಿದ್ದರೆ ಅರಾಜಕತೆ, ಸರ್ವಾಧಿಕಾರದ ಆಡಳಿತ ನಡೆಯುತ್ತದೆ. ಬಿಜೆಪಿ ನಾಯಕರು ಸ್ಪರ್ಧಿಸಿರುವ ಕಡೆ ಪ್ರತಿಪಕ್ಷ ನಾಯಕರನ್ನು ನಾಮಪತ್ರ ಸಲ್ಲಿಸದಂತೆ ತಡೆಯುತ್ತಿದ್ದಾರೆ ಎಂದರು.

  ಹೈದರಾಬಾದ್‌ನಲ್ಲಿ ಬಿಜೆಪಿಯ ಅಭ್ಯರ್ಥಿ ಮುಸ್ಲಿಂ ಹೆಣ್ಣುಮಕ್ಕಳ ಬುರ್ಖಾವನ್ನು ತೆಗೆಸಿದ್ದಾರೆ. ಇದನ್ನು ನೋಡಿದರೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಕಾಣುತ್ತಿದೆಯಾ ಎಂದು ಖರ್ಗೆ ಪ್ರಶ್ನಿಸಿದರು.

  ಯುವ ನಾಯಕನಿಂದ ಶಾಕ್ ಆದ ಚಿರಂಜೀವಿ.. ಅದೇ ಸಮಯದಲ್ಲಿ ಮೆಗಾಸ್ಟಾರ್ ಗೆ ಮೋಸ ಮಾಡಿದ್ದಾನಾ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts