ಹೊನ್ನಾಳಿ: ಬೆಂಗಳೂರಿನಲ್ಲಿ ಈಚೆಗೆ ನಡೆದ 14 ವರ್ಷದೊಳಗಿನ ವಿಭಾಗದ ರಾಜ್ಯಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀ ಸಾಯಿ ಗುರುಕುಲ ರೆಸಿಡೆನ್ಸಿಯಲ್ ಶಾಲೆ ವಿದ್ಯಾರ್ಥಿಗಳನ್ನು ಶಾಸಕ ಡಿ.ಜಿ. ಶಾಂತನಗೌಡ ಶನಿವಾರ ಸನ್ಮಾನಿಸಿದರು.
ನಂತರ ಮಾತನಾಡಿದ ಶಾಸಕ ಡಿ.ಜಿ. ಶಾಂತನಗೌಡ, ಬೆಂಗಳೂರಿನ ಸಿದ್ದಗಂಗಾ ಶಾಲೆ ಆವರಣದಲ್ಲಿ ನಡೆದ ಖೋ-ಖೋ ಪಂದ್ಯಾವಳಿಯಲ್ಲಿ ನಮ್ಮ ಶಾಲೆ ಮಕ್ಕಳು ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದು, 17 ವರ್ಷದೊಳಗಿನ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ಹೆಮ್ಮೆ ತಂದಿದೆ ಎಂದು ಶ್ಲಾಘಿಸಿದರು.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ನಮ್ಮ ಶಾಲೆಯ ಮಕ್ಕಳು ಅಕ್ಟೋಬರ್ 14ರಿಂದ 18ರ ವರೆಗೆೆ ಹರಿಯಾಣದ ಶ್ರೀರಾಮ್ ಗ್ಲೋಬಲ್ ಶಾಲೆಯಲ್ಲಿ ನಡೆಯುವ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಅಲ್ಲಿಯೂ ಗೆದ್ದರೆ ಖೆಲೋ ಇಂಡಿಯಾಕ್ಕೆ ಆಯ್ಕೆಯಾಗುವರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 17 ವರ್ಷದ ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಾದ ಮಧುಕುಮಾರ್, ತಿಪ್ಪೇಸ್ವಾಮಿ ಹಾಗೂ ಶಾಂತಮ್ಮ ಅವರನ್ನು ಸನ್ಮಾನಿಸಿದರು.
ಕಾರ್ಯದರ್ಶಿ ಸೌಮ್ಯಾ ಪ್ರದೀಪ್‌ಗೌಡ್ರ, ಖಜಾಂಚಿ ಸೋಮಶೇಖರ್, ನಿರ್ದೇಶಕರಾದ ಡಿ.ಜಿ. ಪ್ರದೀಪ್‌ಗೌಡ, ಆಡಳಿತಾಧಿಕಾರಿ ಡಿ.ಎಸ್. ಅರುಣ್, ಪ್ರಾಚಾರ್ಯ ದರ್ಶನ್, ಮೋಹನ್, ಹರೀಶ್ ಇದ್ದರು.