ಕಠಿಣ ತಯಾರಿ ನಡೆಸಿದರೆ ಗೆಲುವು ನಿಶ್ಚಿತ

khokho
ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಹೆಮ್ಮಾಡಿ ವೃತ್ತ ಮಟ್ಟದ ಖೋಖೋ ಪಂದ್ಯಾಟ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ, ನಾರಾಯಣ ಕೆ, ನಾರಾಯಣ ಟಿ.ಪೂಜಾರಿ, ತಮ್ಮಯ್ಯ ದೇವಾಡಿಗ ಮೊದಲಾದವರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಕ್ರೀಡೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು, ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ. ಗೆದ್ದವರು ಸೋಲದಂತೆ, ಸೋತವರು ಕಠಿಣ ಶ್ರಮವಹಿಸಿ ಗೆಲ್ಲಲು ತಯಾರಿ ನಡೆಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಗುಜ್ಜಾಡಿ ಶಾಲಾ ವಠಾರದಲ್ಲಿ ಬುಧವಾರ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಹೆಮ್ಮಾಡಿ ವೃತ್ತ ಮಟ್ಟದ ಖೋಖೋ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ನಾರಾಯಣ ಟಿ.ಪೂಜಾರಿ, ಗುಜ್ಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಸದಸ್ಯರಾದ ಹರೀಶ ಮೇಸ್ತ, ತುಂಗ ಪೂಜಾರಿ, ಶ್ರೀಧರ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ದಯಾಕರ ಮೇಸ್ತ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಶಿಕ್ಷಣ ಸಂಯೋಜಕ ಯೋಗೀಶ್, ಮುಖ್ಯ ಶಿಕ್ಷಕ ಗಂಗಾಧರ ಬಂಟ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು. ವಿಶ್ವನಾಥ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net