ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋಖೋ ಪಂದ್ಯಾಟ ಮೊವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆಯಿತು.
ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಪಡೆದ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಅಧ್ಯಕ್ಷತೆ ವಹಿಸಿದ್ದರು. ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ್ ಶೆಟ್ಟಿ, ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್, ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಸಂತೋಷ, ಮೊವಾಡಿ ಹಾಲು ಉತ್ಪಾದಕರ ಸಂಘದ ಕಾರ್ಯನಿರ್ವಹಣಾಧಿಕಾರಿ ಶೇಖರ ಗಾಣಿಗ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಶರಾವತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು. ಶಿಕ್ಷಕಿ ಭಾಗಿರಥಿ ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ
ಬಾಲಕರ ವಿಭಾಗದಲ್ಲಿ ಕಂಚಿಕಾನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದಿದ್ದು, ಚಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಹಕ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಹಾಗೂ ಚಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು.