More

    ಕೆಐಎ ರಸ್ತೆಯಲ್ಲಿ ಅತೀ ವೇಗದ ಚಾಲನೆಗೆ ಬ್ರೇಕ್

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ನಿಯಂತ್ರಿಸುವ ಸಲುವಾಗಿ ವಾಹನಗಳ ವೇಗ ಮಿತಿಗೆ ಬ್ರೇಕ್ ಹಾಕಿದ್ದಾರೆ.

    ನಿಗದಿತ 80 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಚಲಿಸುವ ವಾಹನಗಳ ಮೇಲೆ ಸ್ವಯಂ ಚಾಲಿತ ದಂಡ ವಿಧಿಸುವ ಕ್ಯಾಮರಾಗಳ ಅಳವಡಿಸಲಾಗಿದೆ. ಅತೀ ವೇಗದ ಚಾಲನೆ ಮಾಡುವ ವಾಹನಗಳ ವಿರುದ್ಧ ಅತಿವೇಗದ ಚಾಲನೆ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುತ್ತದೆ ಎಂದು ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್, ಎಚ್ಚರಿಕೆ ನೀಡಿದ್ದಾರೆ.

    ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ 2024ರ ಏಪ್ರಿಲ್ 30ರವರೆಗಿನ ಅಂಕಿ-ಅಂಶಗಳ ಪ್ರಕಾರ ಕೆಐಎ ರಸ್ತೆಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಅಪಘಾತಗಳಿಗೆ ಪ್ರಮುಖ ಕಾರಣ ಚಾಲಕರ ಅತಿವೇಗದ ಚಾಲನೆ. ವೇಗಕ್ಕೆ ಕಡಿವಾಣ ಹಾಕುವ ಉದ್ದೇಶ ಮತ್ತು ರಸ್ತೆ ಸುರಕ್ಷತೆ ಹೆಚ್ಚಿಸುವ ಸಲುವಾಗಿ ವೇಗದ ಚಾಲನೆ ಪತ್ತೆ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

    ಪ್ರತಿ ಗಂಟೆಗೆ 80 ಕಿ.ಮೀಟರ್ ಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಪ್ರಕರಣಗಳನ್ನ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts