‘ಟೇಲ್ಸ್ ಆಫ್​ ಮಹಾನಗರ’ ಟೀಸರ್; ಹಿನ್ನೆಲೆ ಧ್ವನಿ ನೀಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

tales of mahanagar
Published on

ಬೆಂಗಳೂರು: ‘ಗೆಜ್ಜೆನಾದ’, ‘ನಂದ ಲವ್ಸೃ್ ನಂದಿತಾ’, ‘ಕನ್ನಡದ ಕಂದ’, ‘ಆಟ’ ಸೇರಿ ಹಲವು ಚಿತ್ರಗಳಿಗೆ ಆ್ಯಕ್ಷನ್-ಕಟ್ ಹೇಳಿರುವ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್ ಪುತ್ರ ಅಥರ್ವ ನಾಯಕರಾಗಿರುವ ಚಿತ್ರ ‘ಟೇಲ್ಸ್ ಆಫ್ ಮಹಾನಗರ’. ರಾಜೀವ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇಬ್ಬರಿಗೂ ಇದು ಮೊದಲ ಸಿನಿಮಾ ಆಗಿದ್ದು ಸಾಕಷ್ಟು ಸಿದ್ಧತೆಗಳೊಂದಿಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದು ಮಹಾನಗರವೊಂದರಲ್ಲಿ ನಡೆಯುವ ಕಥೆ. ಹೆಣ್ಣು, ಅಧಿಕಾರ, ಧರ್ಮದ ವಿಷಯಗಳಿಗೆ ಸಂಬಂಧಿಸಿದ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಇತ್ತೀಚೆಗಷ್ಟೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ಗೆ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ.

‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್, ರೂಪಾ ರಾಯಪ್ಪ, ಆಶಿಶ್, ಬಿ.ಎಂ.ವೆಂಕಟೇಶ್, ಮೋಹನ್ ಮುಖ್ಯ ತಾರಾಬಳಗದಲ್ಲಿದ್ದಾರೆ. ಉಳಿದಂತೆ ರೋಷನ್ ಛಾಯಾಗ್ರಹಣ, ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸೆಪ್ಟೆಂಬರ್ 15ಕ್ಕೆ ಸಿನಿಮಾ ತೆರೆಗೆ ಬರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net