ಕಿಚ್ಚ ಸುದೀಪ್‌ಗೆ ‘ದಿ ವಿಲನ್‌’ ಸಂಕಷ್ಟ, ದೂರು ದಾಖಲು!

ಬೆಂಗಳೂರು: ದಿ ವಿಲನ್ ಚಿತ್ರದಲ್ಲಿ ಕನ್ನಡದ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಪ್ರೇಮ್ ಮತ್ತು ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕ್ಷಮೆ ಕೇಳುವಂತೆ ಆಗ್ರಹಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ದೂರು ದಾಖಲಿಸಿದ್ದಾರೆ.

ಚಿತ್ರದಲ್ಲಿ ಸುದೀಪ್‌ ಅವರು ಕನ್ನಡದ ಬಾವುಟವನ್ನು ತಮ್ಮ ಸೊಂಟಕ್ಕೆ ಸುತ್ತಿಕೊಂಡಿದ್ದರು. ಇದರಿಂದಾಗಿ ಕನ್ನಡ ಬಾವುಟ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ‘ವಿಲನ್’ ಸಿನಿಮಾದಲ್ಲಿನ ದೃಶ್ಯವನ್ನು ವಿರೋಧಿಸಿ ದೂರು ನೀಡಿದ್ದಾರೆ.

ಈ ವಿಚಾರವಾಗಿ ಪ್ರೇಮ್ ಹಾಗೂ ಸುದೀಪ್ ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)