ಶಿಕ್ಷಣದಂತೆ ಕ್ರೀಡೆಯಲ್ಲೂ ಸಾಧನೆ ತೋರಿ…

Kids Meet

ಶಾಸಕ ಯಶ್​ಪಾಲ್​ ಸುವರ್ಣ ಆಶಯ

ಉಡುಪಿ ಜಿಲ್ಲಾ ಮಟ್ಟದ ಕಿಡ್ಸ್​ ಮೀಟ್​ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಕ್ರೀಡಾಕೂಟಗಳ ಆಯೋಜನೆಯಿಂದ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಅನುಕೂಲವಾಗುತ್ತದೆ. ಮಕ್ಕಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳಬೇಕು. ಉಡುಪಿ ಜಿಲ್ಲೆಯು ಶಿಕ್ಷಣ-ಆರೋಗ್ಯ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದ್ದು, ಕ್ರೀಡಾಕ್ಷೇತ್ರದಲ್ಲೂ ಸಾಧನೆ ಮಾಡುವಂತಾಗಲಿ ಎಂದು ಶಾಸಕ ಯಶ್​ಪಾಲ್​ ಸುವರ್ಣ ಆಶಯ ವ್ಯಕ್ತಪಡಿಸಿದರು.

blank

ಉಡುಪಿ ಜಿಲ್ಲಾ ಅಥ್ಲೆಟಿಕ್​ ಅಸೋಸಿಯೇಷನ್​ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮೇ 17ರಂದು ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಕಿಡ್ಸ್​ ಮೀಟ್​- 2025 ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಅಸೋಸಿಯೇಷನ್​ನ ಅಧ್ಯಕ್ಷ ಹರಿಪ್ರಸಾದ ರೈ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ರಘುಪತಿ ಭಟ್​, ಬ್ರಹ್ಮಾವರ ಸ್ಪೋರ್ಟ್ಸ್​ ಕ್ಲಬ್​ನ ಗೌರವಾಧ್ಯಕ್ಷ ಡಾ.ಚಂದ್ರಶೇಖರ ಹೆಗ್ಡೆ ಇತರರು ಉಪಸ್ಥಿತರಿದ್ದರು.

ಅಸೋಸಿಯೇಷನ್​ನ ಕಾರ್ಯದರ್ಶಿ ದಿನೇಶಕುಮಾರ್​ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವರದರಾಜ ವಂದಿಸಿದರು. ಕ್ರೀಡಾಕೂಟದಲ್ಲಿ 8, 10, 12 ಹಾಗೂ 14 ವರ್ಷದೊಳಗಿನ ವಿಭಾಗದಲ್ಲಿ ಒಟ್ಟು 180 ಮಕ್ಕಳು ಭಾಗವಹಿಸಿದ್ದರು.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank