More

    ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ – ಮಹಾಂತೇಶ ಕವಟಗಿಮಠ

    ಚಿಕ್ಕೋಡಿ: ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರದ ಗ್ರಾಪಂನ 25 ಸ್ಥಾನಗಳಲ್ಲಿ 2 ಕಡೆ ಸಮಬಲ ಹಾಗೂ 13 ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಆದರೆ, ಸ್ಥಳೀಯ ಕಾಂಗ್ರೆಸ್ ಶಾಸಕರು 18 ಗ್ರಾಪಂಗಳು ಕಾಂಗ್ರೆಸ್ ಪಾಲಾಗಿವೆ ಎಂದಿದ್ದಾರೆ. ಕಾಂಗ್ರೆಸ್ ಬೆಂಬಲಿತರು ಎಷ್ಟು ಪಂಚಾಯಿತಿಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬುದನ್ನು ಶಾಸಕರು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸವಾಲು ಹಾಕಿದ್ದಾರೆ.

    ಪಟ್ಟಣದ ತಮ್ಮ ಫಾರ್ಮ್ ಹೌಸ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಕಟ್ಟಕಡೆಯ ಜನರಿಗೂ ತಲುಪಿಸುವ ಉದ್ದೇಶದಿಂದ ಕಾರ್ಯಕರ್ತರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಬೆಳಗಾವಿ ಲೋಕಸಭಾ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ 3,870 ಸ್ಥಾನಗಳ ಪೈಕಿ 2,298 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅದರಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ 25 ಗ್ರಾಪಂನಲ್ಲಿ 13 ಕಡೆ ಬಿಜೆಪಿ ಗೆದ್ದಿದೆ. 10 ಕಡೆ ಕಾಂಗ್ರೆಸ್ ಹಾಗೂ ಎರಡು ಪಂಚಾಯಿತಿ ಅತಂತ್ರವಾಗಿವೆ ಎಂದರು.

    ಗ್ರಾಮೀಣ ಮಟ್ಟದಲ್ಲಿ ಬಿಜೆಪಿ ಗಟ್ಟಿಗೊಳಿಸಬೇಕೆನ್ನುವ ದೃಷ್ಟಿಯಿಂದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಪಂ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಗ್ರಾಪಂ ಚುನಾವಣೆ ಮುಂದಿನ ಜಿಪಂ ಮತ್ತು ತಾಪಂ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತಿಳಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಶೇ.75 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಲೋಕಸಭೆಯಿಂದ ಪಂಚಾಯಿತಿವರೆಗೂ ಬಿಜೆಪಿ ಅಧಿಕಾರ ಹಿಡಿದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಚಿಕ್ಕೋಡಿ ಮಂಡಲ ಅಧ್ಯಕ್ಷ ಸಂಜಯ ಪಾಟೀಲ, ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೋಣವಾಡೆ, ದುಂಡಪ್ಪ ಬೆಂಡವಾಡೆ, ಸಂಜಯ ಪಾಟೀಲ, ಅಜಿತ ದೇಸಾಯಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts