

Rahul Gandhi: ಪ್ರಧಾನಿ ನರೇಂದ್ರ ಮೋದಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಪಾಟ್ನಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸತ್ಯದ ಮುಂದೆ ಸುಳ್ಳಿನ ಅಸ್ತಿತ್ವ ಕ್ಷಣಿಕ ಎಂದಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್, ಸತ್ಯ ಅಹಿಂಸೆಯ ಮುಂದೆ ಸುಳ್ಳು ಮತ್ತು ಹಿಂಸೆ ನಿಲ್ಲಲು ಸಾಧ್ಯವಿಲ್ಲ. ನೀವು ಎಷ್ಟು ಬೇಕಾದರೂ ಹೊಡಿಯಿರಿ, ಸಾಯಿಸಿ ನಾವು ಸತ್ಯ ಮತ್ತು ಸಂವಿಧಾನವನ್ನು ರಕ್ಷಿಸುವುದನ್ನು ನಿಲ್ಲಿಸುವುದಿಲ್ಲ, ಸತ್ಯಮೇವ ಜಯತೇ" ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ
ಬಿಹಾರದ ದರ್ಭಾಂಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ತೇಜಸ್ವಿ ಯಾದವ್ ಅವರ ಪೋಸ್ಟರ್ಗಳನ್ನು ಇರುವ ವೇದಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ತಾಯಿಯವರ ಕುರಿತು ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎನ್ನಲಾಗಿದೆ.
ಪಾಟ್ನಾದ ಕಾಂಗ್ರೆಸ್ ಕಚೇರಿಯ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಜನರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ. ಮತ್ತೊಂದೆಡೆ, ಬಿಜೆಪಿ ಕಾರ್ಯಕರ್ತರು ಹೊರಗಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.(ಏಜೆನ್ಸೀಸ್)