More

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಗುಪ್ತಚರ ಮಾಹಿತಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

    ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ.

    ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಭಾನುವಾರ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts