ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಗುಪ್ತಚರ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಭಾನುವಾರ ಪ್ರಧಾನಿ ಮೋದಿ ಅವರು … Continue reading ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಗುಪ್ತಚರ ಮಾಹಿತಿ