ಅಂತ್ಯ ಸಂಸ್ಕಾರದ ವೇಳೆ ಬಾಲಕ ಜೀವಂತವಾಗಿ ಎದ್ದ ಪ್ರಕರಣ; ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ…

KIMS HUBLI
Published on

ಹುಬ್ಬಳ್ಳಿ: ಮೃತ ಬಾಲಕ ಅಂತ್ಯ ಸಂಸ್ಕಾರದ ವೇಳೆ ಎದ್ದು ಬಂದ ಪ್ರಕರಣ ಎಲ್ಲೆಡೆ ಸುದ್ದಿ ಮಾಡಿತ್ತು. ಅಂತ್ಯ ಸಂಸ್ಕಾರದ ವೇಳೆ ಬಾಲಕನ ಬಾಯಿ ನೀರು ಬಿಡುವ ಸಂದರ್ಭದಲ್ಲಿ ಆತ ತನ್ನ ಕೈಕಾಲನ್ನು ಅಲ್ಲಾಡಿಸಿದ್ದು ಈ ಸಂದರ್ಭದಲ್ಲಿ ಪೋಷಕರು, ಆಸ್ಪತ್ರೆಗೆ ವಾಪಸ್ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, “ಆಸ್ಪತ್ರೆಯಲ್ಲಿ ಬಾಲಕ ಸಾವಿನಪ್ಪಿರುವ ಬಗ್ಗೆ ನಾವು ಹೇಳಿಲ್ಲ. ನಮ್ಮ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಬಾಲಕ ಇನ್ನೂ ಬದುಕೇ ಇದ್ದ. ಆದರೆ ಬಾಲಕನ ಮೆದುಳಿನಲ್ಲಿ ನೀರು ತುಂಬಿಕೊಂಡಿತ್ತು. ಬಾಲಕ ಚಿಕಿತ್ಸೆ ಸ್ಪಂದನೆ ಮಾಡುತ್ತಿರಲಿಲ್ಲ. ನಾವು ಬಾಲಕನ ಪರಿಸ್ಥಿತಿ ವಿವರಣೆ ಮಾಡಿ ಬದುಕುವುದು ಕಷ್ಟ ಅಂತ ಹೇಳಿದ್ದೆವು.

ಹೀಗಾಗಿ ಸ್ವಇಚ್ಛೆಯಿಂದ ಬಾಲಕನ ಪಾಲಕರು ಆಸ್ಪತ್ರೆಯಿಂದ ಕರೆದುಕೊಂಡು ಮನೆಗೆ ಹೋಗಿದ್ದರು. ಕಿಮ್ಸ್ ಆಸ್ಪತ್ರೆಯಿಂದ ಬಾಲಕ ಬಿಡುಗಡೆಯಾದಾಗ ಮೃತಪಟ್ಟಿರಲಿಲ್ಲ. ಮನೆಗೆ ಹೋಗಿ ಕೆಲವು ಗಂಟೆಗಳ ಬಳಿಕ ಬಾಲಕನನ್ನು ಮತ್ತೆ ಕರೆದುಕೊಂಡು ಬಂದರು. ನಾವು ಅಡ್ಮಿಟ್ ಮಾಡುವಂತೆ ಹೇಳಿದ್ದೇವು ಆದರೆ ಅವರು ಬೇಡ ಅಂತ ಮತ್ತೆ ವಾಪಸು ಕರೆದುಕೊಂಡು ಹೋಗಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟಿರಿಲ್ಲ. ಸುಮ್ಮನೆ ಮಧ್ಯೆ ಇರೋರು ಗೊಂದಲ ಸೃಷ್ಟಿ ಮಾಡಿದ್ದಾರೆ” ಎಂದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಸ್ಪಷ್ಟನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net