More

    ಕಿಂಡಿ ಅಣೆಕಟ್ಟು, ಸರ್ವೆ ಆರಂಭ

    ಕುಮಟಾ: ತಾಲೂಕಿನ ಉಪ್ಪಿನಪಟ್ಟಣದಲ್ಲಿ ಕರ್ನಾಟಕ ನೀರಾವರಿ ಅಭಿವೃದ್ಧಿ ನಿಗಮದಡಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜಿಸಲಾಗಿರುವ ಬಹುಗ್ರಾಮ ಕುಡಿಯುವ ನೀರು ಪೂರೈಕೆಯ ಕಿಂಡಿ ಅಣೆಕಟ್ಟು ಕಾಮಗಾರಿಯ ಸರ್ವೆ ಕಾರ್ಯ ನಡೆದಿದೆ.
    ಉಪ್ಪಿನಪಟ್ಟಣದ ಅಘನಾಶಿನಿ ಹಾಗೂ ಚಂಡಿಕಾ ನದಿಯ ಸಂಗಮದ ಸನಿಹದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಈಗಾಗಲೇ ಸರ್ಕಾರದಿಂದ ಸರ್ವೆಗೆ ಆದೇಶವಾಗಿದೆ. ಕಾಮಗಾರಿಯ ವಿಸ್ತ್ರತ ಕ್ರಿಯಾಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಸರ್ವೆ ಜವಾಬ್ದಾರಿಯನ್ನು ಬೆಂಗಳೂರು ಮೂಲದ ಇಐಟಿ ಕಂಪನಿ ಪಡೆದಿದೆ. ಅದರಂತೆ ಯೋಜನಾ ಪ್ರದೇಶದಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ.


    ಅಳಕೋಡ, ಮೂರೂರು, ಹೆಗಡೆ, ಹೊಲನಗದ್ದೆ ಇನ್ನಿತರ 7 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕುಡಿಯುವ ನೀರು ಸಮಸ್ಯೆ ನಿವಾರಿಸುವ ಉದ್ದೇಶದಿಂದ 200 ಕೋಟಿ ರೂ. ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು ಸರ್ವೆ ಕಾರ್ಯ ನಡೆದಿದೆ.
    | ಗಜಾನನ ಪೈ ಜಿಪಂ ಸದಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts