

ಬೆಳ್ತಂಗಡಿ: ಮೈರಳಿಕೆ ಓಡಿಲ್ನಾಳದ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ ನಡೆಯಿತು.
ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಶಾಸಕ ಹರೀಶ್ ಪೂಂಜ, ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ, ದೇವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಯುವ ಸಮಿತಿಯ ಅಧ್ಯಕ್ಷ ನಿತೀಶ್ ಕೆ.ಓಡಿಲ್ನಾಳ, ಭಜನಾ ಸಮಿತಿಯ ಅಧ್ಯಕ್ಷ ಯೋಗೀಶ್ ಕೊಡಂಗೆ, ವಾಮನ ಮೂಲ್ಯ ಮಡಂತಿಲ ಉಪಸ್ಥಿತರಿದ್ದರು.
ದೇವಸ್ಥಾನದಲ್ಲಿ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಗಣಹೋಮ, ರುದ್ರಹೋಮ ಸೋಡರ ಬಳಿ ಉತ್ಸವ, ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಸುದೀಪ್ ಶೆಟ್ಟಿ ಸ್ವಾಗತಿಸಿದರು. ವಿಮಲಾಕ್ಷ ಪಡ್ಪು ವಂದಿಸಿದರು.