More

    ಜೆಎಸ್‌ಎಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಶ್ಲಾಘನೀಯ

    ಧಾರವಾಡ: ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಪ್ರಗತಿಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಮಾಡುತ್ತಿದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸವದತ್ತಿ ರಸ್ತೆಯಲ್ಲಿ ಮೊದಲ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವ ಕನಸನ್ನು ನನಸಾಗಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಽಕಾರಿ ಅಶೋಕ ಸಿಂದಗಿ ಹೇಳಿದರು.
    ಇಲ್ಲಿನ ಮೃತ್ಯುಂಜಯನಗರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೫ನೇ ಜನ್ಮದಿನ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಗಾಳಿಪಟ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
    ವಿದ್ಯಾರ್ಥಿಗಳು ವ್ಯಸನ, ದುಶ್ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಪ್ರತಿಜ್ಞೆ ಸ್ವೀಕರಿಸಿದರು.
    ಅಧ್ಯಕ್ಷತೆ ವಹಿಸಿದ್ದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಸುವರ್ಣ ಮಹೋತ್ಸವ ಹೊಸ್ತಿಲಲ್ಲಿದ್ದು, ಈ ಸುಸಂದರ್ಭದಲ್ಲಿ ಸಂಸ್ಥೆಯು ವಿವಿಧ ಹಲವಾರು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳು ಮೈದಾನದ ಕ್ರೀಡೆಗಳÀಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳುವಂತೆ ಸಂಸ್ಥೆಯು ಪ್ರೇರೇಪಿಸುತ್ತಿದೆ ಎಂದರು.
    ಪ್ರಾಚಾರ್ಯೆ ತ್ರಿವೇಣಿ ಆರ್., ಡಾ. ಬಿ.ಎನ್. ಬಾವಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts