More

    ಕಿತ್ತೂರು ಕೋಟೆ ಅಭಿವೃದ್ಧಿಗೆ ಅನುದಾನ ನೀಡಿ – ಲಕ್ಕಣ್ಣ ಸವಸುದ್ದಿ

    ಬೆಳಗಾವಿ: 2018-19ನೇ ಸಾಲಿನಲ್ಲಿ ಕಿತ್ತೂರು ಸಂಸ್ಥಾನಕ್ಕೆ ಸೇರಿದ ಸ್ಥಳಗಳ ಅಭಿವೃದ್ಧಿಗಾಗಿ 146 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗಿತ್ತು. ಇದಕ್ಕೆ ಹಣಕಾಸು ಇಲಾಖೆಯೂ ಅನುಮೋದನೆ ನೀಡಿದೆ. ಕೂಡಲೇ ರಾಜ್ಯ ಸರ್ಕಾರ ತುರ್ತಾಗಿ ಅನುದಾನ ಬಿಡುಗಡೆಗೊಳಿಸಬೇಕು ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಲಕ್ಕಣ್ಣ ಸವಸುದ್ದಿ ಒತ್ತಾಯಿಸಿದ್ದಾರೆ.

    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕಿತ್ತೂರು ಅಭಿವೃದ್ಧಿಗೆ ಆಸಕ್ತಿ ತಳೆದಿತ್ತು. ಪ್ರಾಧಿಕಾರದ 8ನೇ ಹಂತದ ಯೋಜನೆಯಡಿ 33 ಅಭಿವೃದ್ಧಿ ಕೆಲಸ ಕೈಗೊಳ್ಳಲು ಮುಂದಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಪ್ರಾಧಿಕಾರವನ್ನೇ ಕಡೆಗಣಿಸಿದೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಶೀಘ್ರ ಅವರನ್ನು ಭೇಟಿಯಾಗಿ ಪ್ರಾಧಿಕಾರಕ್ಕೆ ಬಲ ತುಂಬುವಂತೆ ಕೋರಲಾಗುವುದು. ಈ ಬಾರಿ ಬಜೆಟ್‌ನಲ್ಲಿ ಪ್ರಾಧಿಕಾರಕ್ಕೆ 200 ಕೋಟಿ ರೂ.ವಿಶೇಷ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಸವಸುದ್ದಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts