

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು.
ಉಪ ವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದಾಂಡೇಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡದ ಪ್ರಾಧ್ಯಾಪಕಿ ಹಾಗೂ ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಅಧ್ಯಕ್ಷೆ ಡಾ. ವಿನಯಾ ಒಕ್ಕುಂದ ರಾಣಿ ಚನ್ನಮ್ಮ ಕುರಿತು ಉಪನ್ಯಾಸ ನೀಡಿದರು. ವಕೀಲ ಚಂದ್ರಶೇಖರ ನೇಗಿನಾಳ ಮತ್ತು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಶಂಭುಗೌಡ ಸಾಲಿಮನಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ನಿರೂಪಿಸಿದರು.
ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಪ್ರತಿಷ್ಠಾನದ ಪದಾಽಕಾರಿಗಳಾದ ನಾಗರಾಜ ಪಟ್ಟಣಶೆಟ್ಟಿ, ನಿಂಗಣ್ಣ ಕರಿಕಟ್ಟಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಪ್ರದೀಪ ಪಾಟೀಲ, ಇತರರಿದ್ದರು. ಕಾರ್ಯಕ್ರಮದ ನಂತರ ಸುಧಾ ಕಬ್ಬೂರ ಮತ್ತು ತಂಡದವರಿ0ದ ಕಿತ್ತೂರು ರಾಣಿ ಚನ್ನಮ್ಮ ಕುರಿತ ರೂಪಕ ಪ್ರಸ್ತುತಪಡಿಸಲಾಯಿತು.