ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ ಸ್ಟಾರ್ ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರು ಶ್ರುತಿ ರಘುನಾಥನ್ ಅವರನ್ನು ಭಾನುವಾರ ವಿವಾಹವಾದರು. ಈ ಕುರಿತಾದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೆಂಕಟೇಶ್ ಅಯ್ಯರ್ ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಇಂದು ಈ ಜೋಡಿಯ ವಿವಾಹ ಸಂಪ್ರದಾಯಬದ್ಧವಾಗಿ ನೆರವೇರಿತು. ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Venkatesh Iyer gets married with Shruti.
– Many many congratulations to both of them. ❤️ pic.twitter.com/JV82AIsD5c
— Tanuj Singh (@ImTanujSingh) June 2, 2024
ಮದುವೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕೆಕೆಆರ್ ಫ್ರಾಂಚೈಸಿ ಮತ್ತು ತಂಡದ ಸಹ ಆಟಗಾರರು ಸೇರು ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಈ ಜೋಡಿಗೆ ಶುಭ ಹಾರೈಸಿದ್ದಾರೆ.
ವೆಂಕಟೇಶ್ ಅಯ್ಯರ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್ ತಂಡದ ಸದ್ಯನಾಗಿದ್ದಾರೆ. ಈ ಬಾರಿ 14 ಪಂದ್ಯಗಳನ್ನಾಡಿ 370 ರನ್ ಬಾರಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.