More

    ಭಾರತ ಟೆಸ್ಟ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಉಪನಾಯಕ

    ನವದೆಹಲಿ: ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡದ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಖಚಿತಪಡಿಸಿದ್ದಾರೆ. ಉಪನಾಯಕ ರೋಹಿತ್ ಶರ್ಮ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಇದೀಗ ರೋಹಿತ್ ಸ್ಥಾನಕ್ಕೆ ಕನ್ನಡಿಗ ಕೆಎಲ್ ರಾಹುಲ್‌ಗೆ ಬಿಸಿಸಿಐ ಮಣೆ ಹಾಕಿದೆ. 29 ವರ್ಷದ ಕೆಎಲ್ ರಾಹುಲ್, ಇದುವರೆಗೂ 40 ಟೆಸ್ಟ್ ಪಂದ್ಯಗಳಿಂದ ಸರಾಸರಿ 35.16 ರಂತೆ, 6 ಶತಕಗಳು ಒಳಗೊಂಡಂತೆ 2321ರನ್ ಬಾರಿಸಿದ್ದಾರೆ.


    ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಉಪನಾಯಕನಾಗಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಟೆಸ್ಟ್ ತಂಡಕ್ಕೆ ಅಜಿಂಕ್ಯ ರಹಾನೆ ಬದಲಿಗೆ ಮುಂಬೈನವರೇ ಆದ ರೋಹಿತ್ ಶರ್ಮ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಗಾಯದ ಸಮಸ್ಯೆಯಿಂದಾಗಿ 4 ವಾರಗಳ ಕಾಲ ತಂಡದಿಂದ ಹೊರಬಿದ್ದಿದ್ದು, ಸದ್ಯ ಬೆಂಗಳೂರಿನಲ್ಲಿರುವ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ರನ್‌ಗಳಿಸಲು ಪರದಾಡುತ್ತಿರುವ ಅಜಿಂಕ್ಯ ರಹಾನೆಗೆ ಹನ್ನೊಂದರ ಬಳಗದಲ್ಲೇ ಸ್ಥಾನ ಖಾತ್ರಿಯಾವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಹೊಸಬರಿಗೆ ಉಪನಾಯಕ ಸ್ಥಾನ ನೀಡಬೇಕು ಎಂದು ಬಿಸಿಸಿಐ ವಲಯದಲ್ಲಿ ಚರ್ಚೆ ನಡೆದಿತ್ತು. ರಾಹುಲ್ ಅಲ್ಲದೆ, ರಿಷಭ್ ಪಂತ್, ಆರ್.ಅಶ್ವಿನ್ ಹೆಸರುಗಳು ಉಪನಾಯಕ ಸ್ಥಾನಕ್ಕೆ ಕೇಳಿಬಂದಿದ್ದವು.

    ‘ಕೆಎಲ್ ರಾಹುಲ್ ಅವರನ್ನು ತಂಡದ ಉಪನಾಯಕನಾಗಿ ಆಯ್ಕೆ ಸಮಿತಿ ಆಯ್ಕೆ ಮಾಡಿದ್ದು, ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮ ಸರಣಿಗೆ ಅಲಭ್ಯರಾಗಿದ್ದಾರೆ. ರೋಹಿತ್ ಸ್ಥಾನಕ್ಕೆ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ’ – ಜಯ್ ಷಾ, ಬಿಸಿಸಿಐ ಕಾರ್ಯದರ್ಶಿ.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts