More

    ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಬಿದ್ದ ಕೆಎಲ್ ರಾಹುಲ್

    ಸಿಡ್ನಿ: ಮೆಲ್ಬೋರ್ನ್‌ನಲ್ಲಿ ಅಭ್ಯಾಸದ ವೇಳೆ ಮಣಿಕಟ್ಟು ನೋವಿಗೆ ತುತ್ತಾದ ಭಾರತ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಸರಣಿಯ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಕೆಎಲ್ ರಾಹುಲ್ ಹಿಂದಿನ ಎರಡು ಪಂದ್ಯಗಳಲ್ಲೂ ಹನ್ನೊಂದರ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಳ್ಳಲು ವಿಫಲರಾಗಿದ್ದರು. ರಾಹುಲ್ ನಿರ್ಗಮನದಿಂದಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ಗಾಯದ ಸಮಸ್ಯೆ ಮುಂದುವರಿದಂತಾಗಿದೆ. ಸರಣಿ ಆರಂಭಕ್ಕೂ ಮುನ್ನವೇ ಇಶಾಂತ್ ಶರ್ಮ ಹೊರಗುಳಿದರೆ, ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಮೊಹಮದ್ ಶಮಿ ಹಾಗೂ ಉಮೇಶ್ ಯಾದವ್ ಕ್ರಮವಾಗಿ ಅಡಿಲೇಡ್ ಹಾಗೂ ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಗಾಯಕ್ಕೆ ತುತ್ತಾಗಿದ್ದರು.

    ಇದನ್ನೂ ಓದಿ: ವಿಲಿಯಮ್ಸನ್ ದ್ವಿಶತಕದಾಟ, ನ್ಯೂಜಿಲೆಂಡ್ ಹಿಡಿತದಲ್ಲಿ ಪಾಕಿಸ್ತಾನ

    ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ಅಭ್ಯಾಸ ನಡೆಸುತ್ತಿದ್ದ ವೇಳೆ ರಾಹುಲ್ ಎಡಗೈ ಮಣಿಕಟ್ಟು ನೋವಿನ ಸಮಸ್ಯೆ ಎದುರಿಸಿದರು ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ 4 ಪಂದ್ಯಗಳ ಟೆಸ್ಟ್ ಸರಣಿಯ ಉಳಿದ 2 ಪಂದ್ಯಗಳಿಗೆ ಅಲಭ್ಯರಾಗಲಿದ್ದು, ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ನೆಟ್ಸ್‌ನಲ್ಲಿ ಥ್ರೋಡೌನ್ ಎಸೆತಗಳನ್ನು ಎದುರಿಸುತ್ತಿದ್ದಾಗ ಎಸೆತವೊಂದು ರಾಹುಲ್ ಎಡಗೈ ಮಣಿಕಟ್ಟಿಗೆ ಬಿದ್ದಿದೆ ಎನ್ನಲಾಗಿದೆ.

    ಇದನ್ನೂ ಓದಿ: ವಿದ್ಯುತ್ ಉತ್ಪಾದಿಸುತ್ತಿರುವ ಕರ್ನಾಟಕದ ರೈತನಿಗೆ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ

    ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ತಂಡದ ಸಂಯೋಜನೆ ದೃಷ್ಟಿಯಿಂದ ಆರಂಭಿಕ ಎರಡೂ ಪಂದ್ಯಗಳಿಗೂ ರಾಹುಲ್ ಅವರನ್ನು ಪರಿಗಣಿಸಿರಲಿಲ್ಲ. ಮಂಗಳವಾರ ಸಿಡ್ನಿಗೆ ಭಾರತ ತಂಡದೊಂದಿಗೆ ತೆರಳಿದ ರಾಹುಲ್, ಬಳಿಕ ಭಾರತಕ್ಕೆ ವಾಪಸಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts