More

    ಕಿವೀಸ್ ವಿರುದ್ಧ ಟೆಸ್ಟ್ ಸರಣಿಗೆ ಮುನ್ನ ಭಾರತಕ್ಕೆ ಶಾಕ್, ಕೆಎಲ್ ರಾಹುಲ್ ಔಟ್

    ಕಾನ್ಪುರ: ಅನುಭವಿ ಆರಂಭಿಕ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಗಾಯದಿಂದಾಗಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟೆಸ್ಟ್ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ರಾಹುಲ್ ಬಲ ತೊಡೆ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ. ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಫಿಟ್ ಆಗುವ ದೃಷ್ಟಿಯಿಂದ ಅವರು ಇನ್ನು ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿವೀಸ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಗುರುವಾರದಿಂದ ಕಾನ್ಪುರದಲ್ಲಿ ನಡೆಯಲಿದೆ.

    29 ವರ್ಷದ ರಾಹುಲ್ ಮಂಗಳವಾರ ಗ್ರೀನ್‌ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ತಂಡದ ಅಭ್ಯಾಸ ಅವಧಿಯಲ್ಲೂ ಹಾಜರಿರಲಿಲ್ಲ. ಇದುವರೆಗೆ 40 ಟೆಸ್ಟ್ ಆಡಿರುವ ರಾಹುಲ್, 35.16ರ ಸರಾಸರಿಯಲ್ಲಿ 2,321 ರನ್ ಗಳಿಸಿದ್ದಾರೆ. ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ತಂಡಕ್ಕೆ ವಾಪಸ್ ಆಗಿದ್ದ ರಾಹುಲ್ ಶತಕ ಸಿಡಿಸಿ ಮಿಂಚಿದ್ದರು.

    ರಾಹುಲ್ ಗೈರಿನಲ್ಲಿ ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ಜತೆಗೆ ಶುಭಮಾನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ಮುನ್ನ ಪಂಜಾಬ್ ಬ್ಯಾಟರ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸುವ ಲೆಕ್ಕಾಚಾರ ಹಾಕಲಾಗಿತ್ತು. ಇನ್ನೀಗ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಶ್ರೇಯಸ್ ಅಯ್ಯರ್ ಅಥವಾ ಸೂರ್ಯಕುಮಾರ್ ಟೆಸ್ಟ್ ಪದಾರ್ಪಣೆಯ ಅವಕಾಶ ಪಡೆಯುವ ನಿರೀಕ್ಷೆ ಇದೆ.

    ಹಲಾಲ್ ವಿವಾದದಲ್ಲಿ ಟೀಮ್ ಇಂಡಿಯಾ; ಬಿಸಿಸಿಐ ವಿರುದ್ಧ ಕ್ರಿಕೆಟ್‌ಪ್ರೇಮಿಗಳ ಕಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts