WTC ಫೈನಲ್‌ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್ ಬದಲಿಗೆ ಇಶಾನ್ ಕಿಶನ್​ ಆಯ್ಕೆ

WTC Final
Published on

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಭಾರತ ತಂಡವನ್ನು ಪ್ರಕಟಿಸಿದೆ. ಐಪಿಎಲ್ ವೇಳೆ ಗಾಯಗೊಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ಕೆ.ಎಲ್.ರಾಹುಲ್ ಬದಲಿಗೆ ಇಶಾನ್ ಕಿಶನ್​ಗೆ ಆಯ್ಕೆ ಸಮಿತಿ ಮಣೆ ಹಾಕಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿದ್ದು, ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಪಂದ್ಯ ಆರಂಭವಾಗಲಿದೆ. ಇದೀಗ ಬಿಸಿಸಿಐ ಬಿಡುಗಡೆ ಮಾಡಿರುವ ತಂಡ ಇಂತಿದೆ.

ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ಸ್ಟ್ಯಾಂಡ್ ಬೈ ಆಟಗಾರರು

ಋತುರಾಜ್ ಗಾಯಕ್‌ವಾಡ್, ಮುಖೇಶ್ ಕುಮಾರ್ ಮತ್ತು ಸೂರ್ಯಕುಮಾರ್ ಯಾದವ್.

ರಹಾನೆ ಕಂಬ್ಯಾಕ್

ನಿರೀಕ್ಷೆಯಂತೆಯೇ ಅನುಭವಿ ಬ್ಯಾಟ್ಸ್​ಮನ್ ಅಜಿಂಕ್ಯಾ ರಹಾನೆ ಟೆಸ್ಟ್ ತಂಡಕ್ಕೆ ಮರು ಆಯ್ಕೆಯಾಗಿದ್ದಾರೆ. ಕಳಪೆ ಪ್ರದರ್ಶನದ ಕಾರಣದಿಂದ ಉಪನಾಯಕನಾಗಿದ್ದ ರಹಾನೆ ತಂಡದಿಂದ ಹೊರಗುಳಿದ್ದರು. ಇದೀಗ ದೇಶೀಯ ಟೂರ್ನಿ ಹಾಗೂ ಐಪಿಎಲ್​ನಲ್ಲಿ ನೀಡಿರುವ ಉತ್ತಮ ನಿರ್ವಹಣೆಯಿಂದಾಗಿ ಮರಳಿ ಫಾರ್ಮ್​​ಗೆ ಬಂದಿದ್ದು, ಟೆಸ್ಟ್ ತಂಡಕ್ಕೆ ಆಯ್ಕೆ ಆಗಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net